ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Updates: 4.41 ಕೋಟಿ ಜನರು ಗುಣಮುಖ, 1.81 ಲಕ್ಷ ಸಕ್ರಿಯ ಪ್ರಕರಣ

Last Updated 1 ಡಿಸೆಂಬರ್ 2020, 16:19 IST
ಅಕ್ಷರ ಗಾತ್ರ

ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.83 ಲಕ್ಷ ಜನರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, 4,235 ಜನರು ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ 6.37 ಕೋಟಿಗೂ ಹೆಚ್ಚಾಗಿದ್ದು, ಸಾವಿನ ಸಂಖ್ಯೆ 14.77 ಲಕ್ಷಕ್ಕೆ ತಲುಪಿದೆ.

ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಷ್ಟ್ರಗಳ ಸಾಲಿನಲ್ಲಿ ಮೊದಲನೇ ಸ್ಥಾನದಲ್ಲೇ ಮುಂದುವರಿದಿರುವ ಅಮೆರಿಕದಲ್ಲಿ ಈವರೆಗೆ 1.39 ಕೋಟಿಗೂ ಅಧಿಕ ಜನರಿಗೆ ಸೋಂಕು ತಗುಲಿದ್ದು, 2.74 ಲಕ್ಷಕ್ಕೂ ಅಧಿಕ ಜನರು ಸಾವಿಗೀಡಾಗಿದ್ದಾರೆ. ಸದ್ಯ 54,24,087 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 82,29,735 ಜನರು ಗುಣಮುಖರಾಗಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೂ 94,78,099 ಜನರಿಗೆ ಸೋಂಕು ತಗುಲಿದ್ದು, 89,06,652 ಜನರು ಗುಣಮುಖರಾಗಿದ್ದಾರೆ. ಈ ಪೈಕಿ 4,33,624 ಸಕ್ರಿಯ ಪ್ರಕರಣಗಳಿದ್ದರೆ, 1,37,823 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ನಾಲ್ಕನೇ ಸ್ಥಾನದಲ್ಲಿರುವ ರಷ್ಯಾದಲ್ಲಿ ಇಂದು 26,402 ಹೊಸ ಪ್ರಕರಣಗಳು ವರದಿಯಾಗಿವೆ. ಮಾತ್ರವಲ್ಲದೆ 569 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಈ ದೇಶದಲ್ಲಿ ಪ್ರಕರಣಗಳ ಸಂಖ್ಯೆ 23.22 ಲಕ್ಷಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 40,464ಕ್ಕೆ ಏರಿಕೆಯಾಗಿದೆ.

ವರ್ಡೋಮೀಟರ್ ಮಾಹಿತಿ ಪ್ರಕಾರ ಬ್ರೆಜಿಲ್‌ನಲ್ಲಿ ಒಟ್ಟಾರೆ 63,36,278, ಫ್ರಾನ್ಸ್‌ನಲ್ಲಿ 22,22,488, ಸ್ಪೇನ್‌ನಲ್ಲಿ 16,64,945 ಜನರಿಗೆ ಸೋಂಕು ತಗುಲಿದೆ. ಪ್ರಕರಣಗಳು ವರದಿಯಾಗಿವೆ.

ಜಗತ್ತಿನಾದ್ಯಂತ ಈವರೆಗೆ 4.41 ಕೋಟಿ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 1.81 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 1,05,894 ಜನರ ಸ್ಥಿತಿ ಗಂಭೀರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT