ಮಂಗಳವಾರ, ಮಾರ್ಚ್ 2, 2021
18 °C

Covid-19 World Update: 9.83 ಕೋಟಿಗೂ ಅಧಿಕ ಸೋಂಕಿತರು

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 9.83 ಕೋಟಿ ಜನರಿಗೆ ಕೋವಿಡ್‌–19 ಸೋಂಕು ತಗುಲಿದೆ. ಇದರಲ್ಲಿ 7 ಕೋಟಿಗೂ ಅಧಿಕ ಸೋಂಕಿತರು ಗುಣಮುಖರಾಗಿದ್ದು, 21.06 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ವಿಶ್ವದಾದ್ಯಂತ ಇಂದು ಹೊಸದಾಗಿ 280,542 ಪ್ರಕರಣಗಳು ಬೆಳಕಿಗೆ ಬಂದಿದ್ದು, 7,966 ಜನರು ಮೃತಪಟ್ಟಿದ್ದಾರೆ. ಇದೇ ವೇಳೆ 7,06,79,995 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 2.55 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1,11,319 ಜನರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಇಂದು 28,544 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 632 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,20,917ಕ್ಕೆ ಏರಿಕೆಯಾಗಿದೆ. ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ ಒಂದು ಕೋಟಿಗೂ ಅಧಿಕ ಪ್ರಕರಣಗಳು ವರದಿಯಾಗಿವೆ. 

ಉಳಿದಂತೆ ಸೋಂಕು ಪ್ರಕರಣಗಳ ಸಂಖ್ಯೆ ಬ್ರೆಜಿಲ್‌ನಲ್ಲಿ 86.99 ಲಕ್ಷ, ಫ್ರಾನ್ಸ್‌ನಲ್ಲಿ 29.87 ಲಕ್ಷ, ರಷ್ಯಾದಲ್ಲಿ 36.77 ಲಕ್ಷ, ಸ್ಪೇನ್‌ನಲ್ಲಿ 25.60 ಲಕ್ಷಕ್ಕೆ ಏರಿಯಾಗಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು