ಗುರುವಾರ , ಅಕ್ಟೋಬರ್ 29, 2020
28 °C

Covid-19 World Update: ಜಗತ್ತಿನಲ್ಲಿ 67 ಸಾವಿರ ಪೀಡಿತರ ಸ್ಥಿತಿ ಗಂಭೀರ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೊನಾ ಪೀಡಿತರ ಪೈಕಿ 67 ಸಾವಿರ ಪೀಡಿತರ ಸ್ಥಿತಿ ಗಂಭೀರವಾಗಿದ್ದು, ಸುಮಾರು 79 ಲಕ್ಷ ಪೀಡಿತರು ಗಂಭೀರವಲ್ಲದ ಸ್ಥಿತಿಯಲ್ಲಿ ಇದ್ದಾರೆ ಎಂದು ವರ್ಡೋ ಮೀಟರ್‌ ತಿಳಿಸಿದೆ. 

ಈವರೆಗೆ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 3,65,02,648ಕ್ಕೆ ಮುಟ್ಟಿದ್ದು, 10,62,107 ಮಂದಿ ಮೃತಪಟ್ಟಿದ್ದಾರೆ. 2,74,70,758 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 79,69,783 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಎಂದು ಕೊರೊನಾ ವೈರಸ್‌ ವರ್ಡೊ ಮೀಟರ್‌ ತಿಳಿಸಿದೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 77,85,026 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 2,17,056 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 49,96,972 ಜನರು ಈ ವರೆಗೆ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ     68,35,655, ಬ್ರೆಜಿಲ್‌ನಲ್ಲಿ 50,02,357, ರಷ್ಯಾದಲ್ಲಿ 12,60,112, ಕೊಲಂಬಿಯಾದಲ್ಲಿ 8,77,683,  ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು