ಮಂಗಳವಾರ, ಡಿಸೆಂಬರ್ 1, 2020
18 °C

Covid-19 World Update: ನಾಲ್ಕು ಕೋಟಿಯತ್ತ ಸಾಗಿದ ಗುಣಮುಖರ ಸಂಖ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಜಗತ್ತಿನಾದ್ಯಂತ ಕೋವಿಡ್‌–19 ಪ್ರಕರಣಗಳ ಸಂಖ್ಯೆ 5.67 ಕೋಟಿಗೆ ಏರಿಕೆಯಾಗಿದ್ದು, ಗುಣಮುಖರ ಸಂಖ್ಯೆ ನಾಲ್ಕು ಕೋಟಿಯತ್ತ ಸಾಗಿದೆ ಎಂದು ವರ್ಡೋಮೀಟರ್‌ ವೆಬ್‌ಸೈಟ್‌ ವರದಿ ಮಾಡಿದೆ.

ಇಂದು 2,16,072 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಜಗತ್ತಿನಾದ್ಯಂತ ಈವರೆಗೆ ವರದಿಯಾದ ಪ್ರಕರಣಗಳ ಸಂಖ್ಯೆ 5,67,71,361ಕ್ಕೆ ತಲುಪಿದೆ. ಇದರಲ್ಲಿ 3,95,22,892 ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಸಾವಿಗೀಡಾದ 4,265 ಮಂದಿ ಸೇರಿ ಒಟ್ಟು 13,58,366 ಸೋಂಕಿತರು ಮೃತಪಟ್ಟಿದ್ದಾರೆ. ಉಳಿದಂತೆ ಇನ್ನೂ 1.58 ಕೋಟಿ ಪ್ರಕರಣಗಳು ಸಕ್ರಿಯವಾಗಿವೆ.

ಅತಿಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಈ ದಿನ 13 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಈ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1.18 ಕೋಟಿಗೆ ಏರಿಕೆಯಾಗಿದೆ. ಇಲ್ಲಿ ಒಟ್ಟು 2,56,479 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 71.70 ಲಕ್ಷ ಜನರು ಗುಣಮುಖರಾಗಿದ್ದಾರೆ.

ಭಾರತದಲ್ಲಿ 89.70 ಲಕ್ಷ, ಬ್ರೆಜಿಲ್‌ನಲ್ಲಿ 59.47 ಲಕ್ಷ, ಫ್ರಾನ್ಸ್‌ನಲ್ಲಿ 20.65ಲಕ್ಷ, ರಷ್ಯಾದಲ್ಲಿ 20.15 ಲಕ್ಷ, ಸ್ಪೇನ್‌ನಲ್ಲಿ 15.42 ಲಕ್ಷ, ಇಂಗ್ಲೆಂಡ್‌ನಲ್ಲಿ 14.30 ಲಕ್ಷ, ಅರ್ಜೆಂಟೈನಾದಲ್ಲಿ 13.39 ಲಕ್ಷ, ಇಟಲಿಯಲ್ಲಿ 12.72 ಲಕ್ಷ ಪ್ರಕರಣಗಳು ವರದಿಯಾಗಿವೆ.

ಪೋಲೆಂಡ್‌ನಲ್ಲಿ 637 ಸಾವು
ಪೋಲೆಂಡ್‌ನಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಏರುತ್ತಾ ಸಾಗಿವೆ. ಇಂದು ಇಲ್ಲಿ ಹೊಸದಾಗಿ ಒಟ್ಟು 23,975 ಪ್ರಕರಣಗಳು ಪತ್ತೆಯಾಗಿವೆ. ಮಾತ್ರವಲ್ಲದೆ 637 ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,96,798ಕ್ಕೆ ತಲುಪಿದ್ದು, 12,088 ಮಂದಿ ಮೃತಪಟ್ಟಿದ್ದಾರೆ. ಇದೇ ದಿನ ಮೆಕ್ಸಿಕೋದಲ್ಲಿ 502, ಇರಾನ್‌ನಲ್ಲಿ 476 ಮತ್ತು ರಷ್ಯಾದಲ್ಲಿ 463 ಮಂದಿ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು