ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಚೀನಾದ ಹಲವೆಡೆ ಡೆಲ್ಟಾ ರೂಪಾಂತರ ಹರಡುವಿಕೆ ತೀವ್ರ, ಕಠಿಣ ನಿರ್ಬಂಧ ಜಾರಿ

Last Updated 31 ಜುಲೈ 2021, 6:26 IST
ಅಕ್ಷರ ಗಾತ್ರ

ಬೀಜಿಂಗ್: ಚೀನಾದ ಕೆಲವು ಕಡೆಗಳಲ್ಲಿ ಮತ್ತು ಆಸ್ಟ್ರೇಲಿಯಾದಲ್ಲಿ ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರದಿಂದ ಉಂಟಾಗುವ ಸೋಂಕು ಪ್ರಸರಣ ಹೆಚ್ಚಾಗಿದೆ. ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಎರಡೂ ದೇಶಗಳು ಕಠಿಣ ನಿರ್ಬಂಧಗಳನ್ನು ವಿಧಿಸಲು ಮುಂದಾಗಿವೆ.

ಡೆಲ್ಟಾ ರೂಪಾಂತರವು ಮಾರಕವಾಗಿ ಪರಿವರ್ತನೆಯಾಗುವ ಮೊದಲು ಪ್ರಸರಣ ತಡೆಯುವ ನಿಟ್ಟಿನಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕೆಂದು ಡಬ್ಲ್ಯುಎಚ್‌ಒ ಎಚ್ಚರಿಕೆ ನೀಡಿತ್ತು.

ಚೀನಾದ ಫುಜಿಯಾನ್‌ ಮತ್ತು ಚಾಂಗ್‌ಕ್ವಿಂಗ್‌ನಲ್ಲಿ ಸೋಂಕು ಹರಡುವಿಕೆ ಹೆಚ್ಚಾಗಿದೆ. ನಾನ್‌ಜಿಂಗ್ ನಗರದಲ್ಲಿ 200ಕ್ಕೂ ಹೆಚ್ಚು ಡೆಲ್ಟಾ ಪ್ರಕರಣಗಳು ಪತ್ತೆಯಾಗಿವೆ. ಆರಂಭದಲ್ಲಿ ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 9 ಮಂದಿ ಸ್ವಚ್ಛತಾ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು.

10 ಲಕ್ಷಕ್ಕೂ ಹೆಚ್ಚು ಜನರು ಇರುವ ಪ್ರದೇಶಗಳನ್ನುಲಾಕ್‌ಡೌನ್‌ಗೆ ಒಳಪಡಿಸುವ ಮೂಲಕ ಚೀನಾ ಸರ್ಕಾರವು ತ್ವರಿತವಾಗಿ ಹರಡಬಲ್ಲ ಡೆಲ್ಟಾ ರೂಪಾಂತರ ಪ್ರಸರಣ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಸಾಮೂಹಿಕ ಸೋಂಕು ಪತ್ತೆ ಪರೀಕ್ಷೆ ಅಭಿಯಾನಗಳನ್ನೂ ಆರಂಭಿಸಿದೆ.

ಡೆಲ್ಟಾ ರೂಪಾಂತರದಿಂದಾಗಿ ವಿಶ್ವದಾದ್ಯಂತ ಕಳೆದ ನಾಲ್ಕು ವಾರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ ಎಂದು ಡಬ್ಲ್ಯುಎಚ್‌ಒ ಹೇಳಿದೆ.

ಮೊದಲು ಭಾರತದಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ಡೆಲ್ಟಾ ರೂಪಾಂತರ ಈಗಾಗಲೇ 132 ದೇಶಗಳಲ್ಲಿ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT