ಮೆಕ್ಸಿಕೊ ಸಿಟಿ: ಜಗತ್ತಿನಾದ್ಯಂತ 3.25 ಕೋಟಿಗೂ ಹೆಚ್ಚು ಕೋವಿಡ್-19 ಪ್ರಕರಣಗಳು ದಾಖಲಾಗಿದ್ದರೆ, 9.89 ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ವರ್ಡೊ ಮೀಟರ್ಸ್ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ಒಟ್ಟು ಪ್ರಕರಣಗಳ ಪೈಕಿ ಈವರೆಗೂ 2.39 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಒಟ್ಟು 75,27,932 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ.

ಮೆಕ್ಸಿಕೊದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 75 ಸಾವಿರ ದಾಟಿದೆ. ಸೋಂಕಿನಿಂದಾಗಿ ಅತಿಹೆಚ್ಚು ಜನ ಮೃತಪಟ್ಟ ರಾಷ್ಟ್ರಗಳ ಸಾಲಿನಲ್ಲಿ ಮೆಕ್ಸಿಕೊ ಈಗ ನಾಲ್ಕನೇ ಸ್ಥಾನದಲ್ಲಿದೆ. ಅಮೆರಿಕ, ಬ್ರೆಜಿಲ್, ಭಾರತ ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.

ಸೋಂಕಿನಿಂದಾಗಿ ಗುರುವಾರ 490 ಜನ ಮೃತಪಟ್ಟಿದ್ದಾರೆ ಎಂದು ಮೆಕ್ಸಿಕೊ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಅಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 75,439ಕ್ಕೆ ಏರಿಕೆಯಾಗಿದೆ. 7.15 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 71,99,425 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 2,07,812 ಮಂದಿ ಮೃತಪಟ್ಟಿದ್ದಾರೆ ಹಾಗೂ 44,41,986 ಮಂದಿ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ 58,43,349, ಬ್ರೆಜಿಲ್‌ನಲ್ಲಿ 46,59,909, ರಷ್ಯಾದಲ್ಲಿ 11,36,048, ಸ್ಪೇನ್‌ನಲ್ಲಿ7,04,209 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ:ಕೋವಿಡ್–19: ಜಾನ್ಸನ್ &ಜಾನ್ಸನ್ನಿಂದ ಲಸಿಕೆಯ ಅಂತಿಮ ಹಂತದ ಪ್ರಯೋಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.