ಮಂಗಳವಾರ, ನವೆಂಬರ್ 24, 2020
19 °C

Covid-19 World Update: ಫ್ರಾನ್ಸ್‌ನಲ್ಲಿ ಭಾರತಕ್ಕಿಂತ ಅಧಿಕ ಸಕ್ರಿಯ ಪ್ರಕರಣಗಳು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಪ್ಯಾರಿಸ್‌ನಲ್ಲಿ ಜನರು ಮಾಸ್ಕ್ ಧರಿಸಿ ಓಡಾಡುತ್ತಿರುವುದು–ಸಂಗ್ರಹ ಚಿತ್ರ

ಲಂಡನ್‌: ಕೋವಿಡ್‌–19 ಲಸಿಕೆ ಪ್ರಯೋಗದಲ್ಲಿ ಮುಂಚೂಣಿಯಲ್ಲಿರುವ ಆಕ್ಸ್‌ಫರ್ಡ್‌ ಯೂನಿವರ್ಸಿಟಿ ಅಭಿವೃದ್ಧಿ ಪಡಿಸಿರುವ ಲಸಿಕೆಯು ಪ್ರಯೋಗಕ್ಕೆ ಒಳಪಟ್ಟಿರುವ ಎಲ್ಲ ವಯಸ್ಕರಲ್ಲಿಯೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದನ್ನು ಗುರುತಿಸಲಾಗಿದೆ. ಆಸ್ಟ್ರಾಜೆನೆಕಾ ಜೊತೆಗೆ ಕೋವಿಡ್‌ ಲಸಿಕೆಯ ಪ್ರಯೋಗ ನಡೆಸಲಾಗುತ್ತಿದೆ.

ಜಗತ್ತಿನಾದ್ಯಂತ ಒಟ್ಟು 4.42 ಕೋಟಿಗೂ ಅಧಿಕ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿದ್ದು, 3.24 ಕೋಟಿ ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಈವರೆಗೂ 11.71 ಲಕ್ಷಕ್ಕೂ ಹೆಚ್ಚು ಜನ ಸಾವಿಗೀಡಾಗಿರುವುದು ವರ್ಡೊಮೀಟರ್‌ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ಜಗತ್ತಿನಲ್ಲಿ 1.06 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಅಮೆರಿಕದಲ್ಲಿ ಅತಿ ಹೆಚ್ಚು 29,27,982 ಮಂದಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ 79 ಲಕ್ಷಕ್ಕೂ ಅಧಿಕ ಪ್ರಕರಣಗಳಿರುವ ಭಾರತ ಎರಡನೇ ಸ್ಥಾನದಲ್ಲಿದೆ. ಆದರೆ, ಸಕ್ರಿಯ ಪ್ರಕರಣಗಳ ಆಧಾರದಲ್ಲಿ ಫ್ರಾನ್ಸ್‌ನಲ್ಲಿ ಭಾರತಕ್ಕಿಂತಲೂ ಅಧಿಕ ಪ್ರಕರಣಗಳಿವೆ.

ಫ್ರಾನ್ಸ್‌ನಲ್ಲಿ 10,50,438 ಪ್ರಕರಣಗಳು, ಭಾರತದಲ್ಲಿ 6,11,605 ಪ್ರಕರಣಗಳು ಹಾಗೂ ಬ್ರೆಜಿಲ್‌ನಲ್ಲಿ 3,78,876 ಪ್ರಕರಣಗಳಿವೆ.

ಚೀನಾದಲ್ಲಿ ಮಂಗಳವಾರ ಕೊರೊನಾ ವೈರಸ್‌ ಸೋಂಕು ದೃಢಪಟ್ಟ 42 ಹೊಸ ಪ್ರಕರಣಗಳು ದಾಖಲಾಗಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು