ಗುರುವಾರ , ಜೂನ್ 24, 2021
29 °C

Covid-19 World Update| ವೃದ್ಧರು, ಕಾಯಿಲೆ ಇರುವವರು ಎಚ್ಚರ ಅಗತ್ಯ –WHO

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ವಿಶ್ವಸಂಸ್ಥೆ: ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ವಯೋವೃದ್ದರು ಮತ್ತು ದೀರ್ಘಕಾಲಿನ ರೋಗಗಳಿಂದ ಬಳಲುತ್ತಿರುವವರು ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಭಾರತ ಸೇರಿದಂತೆ ಇತರೆ ದೇಶಗಳಲ್ಲಿ ಲಸಿಕೆ ಅಭಿವೃದ್ದಿಯ ಪ್ರಯೋಗಗಳು ನಡೆಯುತ್ತಿದ್ದು ಲಸಿಕೆ ಬಳಕೆಗೆ ಲಭ್ಯವಾಗುವವರೆಗೂ ವೃದ್ಧರು ಮತ್ತು  ದೀರ್ಘಕಾಲಿನ ಕಾಯಿಲೆಗಳು ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ವಿಶ್ವಸಂಸ್ಥೆ ಹೇಳಿದೆ.

ಇವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಸೋಂಕಿನ ಅಪಾಯವಿದ್ದು ಉಸಿರಾಟ ಸಮಸ್ಯೆ ಎದುರಾಗಿ ವಿಷಮ ಪರಿಸ್ಥಿತಿ ಉಂಟಾಗಬಹುದು ಎಂದು ಆರೋಗ್ಯ ಸಂಸ್ಥೆ ತಿಳಿಸಿದೆ.

ವರ್ಲ್ಡೊಮೀಟರ್ ಅಂಕಿ ಅಂಶ ಪ್ರಕಾರ ಆಗಸ್ಟ್‌ 20ರ ಬೆಳಗ್ಗೆ 10 ಗಂಟೆ ವೇಳೆಗೆ ಜಾಗತಿಕವಾಗಿ 2,25,80,254 ಪ್ರಕರಣಗಳು ದೃಢಪಟ್ಟಿದ್ದು 7,91,002 ಸೋಂಕಿತರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೂ 1,53,01,278 ಜನರು ಗುಣಮುಖರಾಗಿದ್ದಾರೆ. ಒಟ್ಟು 64,87,974 ಪ್ರಕರಣಗಳು ಸಕ್ರಿಯವಾಗಿವೆ. 

ಅಮೆರಿಕ 57,00,931 ಸೋಂಕಿತರೊಂದಿಗೆ ಕೋವಿಡ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಸದ್ಯ ಅಮೆರಿಕದಲ್ಲಿ1,76,337 ಮಂದಿ ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ. 30,62,331 ಜನರು ಈವರೆಗೆ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಅಮೆರಿಕ ನಂತರ ಅತಿಹೆಚ್ಚು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿರುವ ಬ್ರೆಜಿಲ್‌‌ನಲ್ಲಿ 34,60,413 ಪ್ರಕರಣಗಳು ಪತ್ತೆಯಾಗಿವೆ. 26,15,254 ಸೋಂಕಿತರು ಗುಣಮುಖರಾಗಿದ್ದು, 1,11,189 ಜನರು ಮೃತಪಟ್ಟಿದ್ದಾರೆ.

ಕೊರೊನಾ ವೈರಸ್ ಸೋಂಕಿತರ ಪೈಕಿ ಮೂರನೇ ಸ್ಥಾನಕ್ಕೇರಿರುವ ಭಾರತದಲ್ಲಿ 28,36,925  ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, 20,96,068 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ 53,994 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ರಷ್ಯಾದಲ್ಲಿ 9,37,321 , ದಕ್ಷಿಣ ಆಫ್ರಿಕಾದಲ್ಲಿ 5,96,060, ಪೆರುವಿನಲ್ಲಿ 5,58,420 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು