ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: 1,99 ಕೋಟಿ ಸೋಂಕಿತರು, ರಷ್ಯಾ ಲಸಿಕೆಯತ್ತ ಎಲ್ಲರ ಚಿತ್ತ

Last Updated 10 ಆಗಸ್ಟ್ 2020, 16:16 IST
ಅಕ್ಷರ ಗಾತ್ರ

ವಾಷಿಂಗ್ಟನ್: ಜಗತ್ತಿನಾದ್ಯಂತ 1,99,09,062 ಜನರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಇವರಲ್ಲಿ 1,21,38,271 ಸೋಂಕಿತರು ಗುಣಮುಖರಾಗಿದ್ದು ಜಗತ್ತಿನ ಚಿತ್ತ ರಷ್ಯಾ ಲಸಿಕೆಯತ್ತ ನೆಟ್ಟಿದೆ.

ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ಸಂಪನ್ಮೂಲ ಕೇಂದ್ರ ಮಾಹಿತಿ ನೀಡಿದ್ದು ಸೋಂಕಿತರ ಸಂಖ್ಯೆ 2 ಕೋಟಿಯತ್ತ ಸಾಗಿದೆ ಎಂದು ಹೇಳಿದೆ. ಜಾಗತಿಕವಾಗಿ 7,27,897 ಸೋಂಕಿತರು ಮೃತಪಟ್ಟಿದ್ದಾರೆ.

ಆಗಸ್ಟ್‌ 12ಕ್ಕೆ ರಷ್ಯಾದಲ್ಲಿ ಕೋವಿಡ್‌ ಲಸಿಕೆ ಬಿಡುಗಡೆ ಮಾಡಲಾಗುವುದು ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ.ಮನುಷ್ಯರ ಮೇಲೆ ಕೋವಿಡ್‌ ಲಸಿಕೆಯ ಮೂರನೇ ಹಂತದ ಪ್ರಯೋಗದಲ್ಲಿ ಭಾಗಿಯಾದವರಿಗೆ ಅಂತಿಮ ಪರೀಕ್ಷೆಗಳನ್ನು ನಡೆಸಲಾಗಿದೆ. ಪ್ರಯೋಗಗಳಲ್ಲಿ ಭಾಗಿಯಾದ ಎಲ್ಲ 38 ಜನರಲ್ಲಿಯೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದನ್ನು ಗಮನಿಸಿರುವುದಾಗಿ ರಷ್ಯಾ ರಕ್ಷಣಾ ಸಚಿವಲಯ ಹೇಳಿರುವುದಾಗಿ ವರದಿಯಾಗಿದೆ.

ಜೂನ್‌ 18ರಿಂದ ಕ್ಲಿನಿಕಲ್‌ ಟ್ರಯಲ್‌ಗಳನ್ನು (ಮನುಷ್ಯರ ಮೇಲೆ) ಆರಂಭಿಸಲಾಗಿತ್ತು. ಪ್ರಯೋಗಕ್ಕೆ ಒಳಗಾದವರ ಪೈಕಿ ಮೊದಲ ಗುಂಪು ಜುಲೈ 15ರಂದು ಸಂಶೋಧನಾ ಕೇಂದ್ರಗಳಿಂದ ಬಿಡುಗಡೆಯಾಗಿದೆ ಹಾಗೂ ಎರಡನೇ ಗುಂಪು ಜುಲೈ 20ರಂದು ಮನೆಗೆ ಮರಳಿದೆ ಎಂದು ರಷ್ಯಾ ತಿಳಿಸಿದೆ.

ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಈ ವರೆಗೆ 5,05.3,123 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಲ್ಲಿ 16,56,864 ಸೋಂಕಿತರು ಗುಣಮುಖರಾಗಿದ್ದು, 1,63,077 ಮಂದಿ ಮೃತಪಟ್ಟಿದ್ದಾರೆ.

ಅಮೆರಿಕ ನಂತರ ಹೆಚ್ಚು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿರುವ ಬ್ರೆಜಿಲ್‌ನಲ್ಲಿ 30,35,422 ಪ್ರಕರಣಗಳು ಬೆಳಕಿಗೆ ಬಂದಿವೆ. 23,56,983 ಸೋಂಕಿತರು ಗುಣಮುಖರಾಗಿದ್ದು, 1,01,049 ಜನರು ಮೃತಪಟ್ಟಿದ್ದಾರೆ.

ರಷ್ಯಾದಲ್ಲಿ 8,90,799, ದಕ್ಷಿಣ ಆಫ್ರಿಕಾದಲ್ಲಿ 5.59,859 , ಮೆಕ್ಸಿಕೋದಲ್ಲಿ 4,80,278 ಪೆರುವಿನಲ್ಲಿ 4,78,024, ಕೊಲಂಬಿಯಾದಲ್ಲಿ, 3,87,481 ಪ್ರಕರಣಗಳು ವರದಿಯಾಗಿವೆ.

ಜಗತ್ತಿನಲ್ಲೇ ಮೊದಲು ಸೋಂಕು ಕಾಣಿಸಿಕೊಂಡ ಚೀನಾದಲ್ಲಿ ಈ ವರೆಗೆ 88,862 ಪ್ರಕರಣಗಳು ದೃಢಪಟ್ಟಿದ್ದು 4,685 ಸೋಂಕಿತರು ಮೃತಪಟ್ಟಿದ್ದಾರೆ. 1,998 ಜನರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚೀನಾ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT