ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ-ನ್ಯೂಜಿಲೆಂಡ್ ವಿಮಾನಗಳಲ್ಲಿ ಪ್ರಯಾಣಿಸುವವರ ಮೇಲೆ ಹೆಚ್ಚಿನ ನಿಗಾ

ಕೋವಿಡ್‌ ಹೆಚ್ಚಳ
Last Updated 23 ಜೂನ್ 2021, 1:21 IST
ಅಕ್ಷರ ಗಾತ್ರ

ಸಿಡ್ನಿ: ಕೋವಿಡ್‌ ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ –ನ್ಯೂಜಿಲೆಂಡ್‌ ನಡುವೆ ವಿಮಾನಗಳಲ್ಲಿ ಪ್ರಯಾಣಿಸುವವರ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.

ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಿಂದ ಸಿಡ್ನಿಗೆ ಬಂದ ಪ್ರಯಾಣಿಕರಲ್ಲಿ ಹೆಚ್ಚಿನವರಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ಪ್ರಯಾಣಿಸಿರುವ ಎರಡು ವಿಮಾನಗಳಲ್ಲಿನ ಪ್ರಯಾಣಿಕರನ್ನು ತಕ್ಷಣವೇ ಪ್ರತ್ಯೇಕಿಸಲು ಮತ್ತು ಕೋವಿಡ್‌ ಪರೀಕ್ಷೆಗೆ ಒಳಪಡಿಸುವಂತೆ ಆದೇಶಿಸಲಾಗಿದೆ.

ಸಿಡ್ನಿಯಲ್ಲಿ ಕೋವಿಡ್‌ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿದ್ದು, ಅತಂಕಕ್ಕೆ ಕಾರಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಟ್ರೇಲಿಯಾದ ನ್ಯೂ ಸೌತ್‌ ವೇಲ್ಸ್‌ ನಡುವೆ ಮೂರು ದಿನದ ವರೆಗೆ ವಿಮಾನ ಹಾರಾಟವನ್ನು ನಿಷೇಧಿಸಲಾಗಿದೆ ಎಂದು ನ್ಯೂಜಿಲೆಂಡ್ ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ಹೆಚ್ಚು ಜನಸಂಖ್ಯೆ ಹೊಂದಿರುವ ನ್ಯೂ ಸೌತ್ ವೇಲ್ಸ್‌ನಲ್ಲಿ ಕಳೆದ ಆರು ದಿನಗಳಿಂದ 21 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.

ಡೆಲ್ಟಾ ರೂಪಾಂತರ ತಳಿ ಹರಡುತ್ತಿರುವ ಕಾರಣಕ್ಕೆ ಆಸ್ಟ್ರೇಲಿಯಾ ರಾಜಧಾನಿ ಸಿಡ್ನಿಯಲ್ಲಿ ಎಲ್ಲಾ ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಕೋವಿಡ್‌ ಕಾಣಿಸಿಕೊಂಡಾಗಿನಿಂದ ಆಸ್ಟ್ರೇಲಿಯಾದಲ್ಲಿ 30,350 ಪ್ರಕರಣಗಳು ಪತ್ತೆಯಾಗಿವೆ. ಆ ಪೈಕಿ 910 ಮಂದಿ ಮೃತಪಟ್ಟಿದ್ದಾರೆ. ಇತ್ತ ನ್ಯೂಜಿಲೆಂಡ್‌ನಲ್ಲಿ ಇದುವರೆಗೆ 2,300ಕ್ಕೂ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 26 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT