ಸ್ಯಾಕ್ರಮೆಂಟೊ: ‘ಅಮೆರಿಕದ ಕ್ಯಾಲಿಫೋರ್ನಿಯಾದ ಕೇಂದ್ರ ಭಾಗದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಅಲ್ಲಿನ ಆಸ್ಪತ್ರೆಗಳಲ್ಲಿರುವ ತೀವ್ರ ನಿಗಾ ಘಟಕಗಳಲ್ಲಿನ (ಐಸಿಯು) ಹಾಸಿಗೆಗಳು ಭರ್ತಿಯಾಗಿವೆ’ ಎಂದು ಸ್ಥಳೀಯ ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಕ್ಯಾಲಿಫೋರ್ನಿಯಾದಲ್ಲಿ ಇದುವರೆಗೆ ಪ್ರಾಥಮಿಕ ಹಂತದ ಲಸಿಕೆ ಪಡೆಯದವರಲ್ಲಿ ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. ಗುರುವಾರದ ವೇಳೆಗೆ ಒಟ್ಟು 8,630 ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಫ್ರೆಸ್ನೊ ಕೌಂಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೃಢಪಡಿಸಿದ ಮತ್ತು ಶಂಕಿತ ಕೊರೊನಾ ವೈರಸ್ ರೋಗಿಗಳ ಸಂಖ್ಯೆ ನಾಲ್ಕು ವಾರಗಳ ಹಿಂದೆ ಇದ್ದ ಸಂಖ್ಯೆಗಳಿಗಿಂತ ಎರಡು ಪಟ್ಟು ಹೆಚ್ಚಾಗಿದೆ’ ಎಂದು ಸ್ಥಳೀಯ ಮಾಧ್ಯಮ ‘ಫ್ರೆಸ್ನೊ ಬೀ’ ವರದಿ ಮಾಡಿದೆ.

‘8 ಕೌಂಟಿ ಸ್ಯಾನ್ ಜೋಕ್ವಿನ್ ವ್ಯಾಲಿ ಪ್ರದೇಶದಲ್ಲಿನ ಆಸ್ಪತ್ರೆಗಳಲ್ಲಿವಯಸ್ಕರಿಗಾಗಿ ಶೇ 10ರಷ್ಟು ಐಸಿಯು ಹಾಸಿಗೆಗಳಿವೆ. ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಸದ್ಯಕ್ಕೆ ಕೌಂಟಿ ಪ್ರದೇಶದಲ್ಲಿನ ಆಸ್ಪತ್ರೆಗಳಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ಸಂಖ್ಯೆ ಹೆಚ್ಚಾದಲ್ಲಿ ಕ್ಯಾಲಿಫೋರ್ನಿಯಾದ ಆಸ್ಪತ್ರೆಗಳಿಗೆ ರೋಗಿಗಳನ್ನು ವರ್ಗಾಯಿಸಲಾಗುವುದು’ ಎಂದು ಆರೋಗ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.