ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದಲ್ಲಿ ಕೋವಿಡ್ ಏರಿಕೆ: ವಿದೇಶಿಗರಿಗೆ ಪರೀಕ್ಷೆ ಕಡ್ಡಾಯಗೊಳಿಸಿದ ಅಮೆರಿಕ

Last Updated 6 ಜನವರಿ 2023, 2:13 IST
ಅಕ್ಷರ ಗಾತ್ರ

ನೇವಾರ್ಕ್: ಚೀನಾದಲ್ಲಿ ಕೋವಿಡ್– 19 ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿರುವ ಬೆನ್ನಲ್ಲೇ, ಅಮೆರಿಕದಲ್ಲಿ ವಿದೇಶಿ ಪ್ರಯಾಣಿಕರ ಪರೀಕ್ಷೆಯಲ್ಲಿ ಹೆಚ್ಚಳವಾಗಿದೆ.

ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಅಮೆರಿಕ ಸರ್ಕಾರ ಕೋವಿಡ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ.

ಸರ್ಕಾರದ ಸೂಚನೆಯಂತೆ, ಕೋವಿಡ್ ಪರೀಕ್ಷೆಯ ಜತೆಗೆ, ಹೊಸತಳಿ ಮತ್ತು ರೂಪಾಂತರಗಳ ಪತ್ತೆಗೂ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.

ಅಮೆರಿಕದ ಕಾಯಿಲೆ ನಿಯಂತ್ರಣ ಮತ್ತು ತಡೆ ಕಾರ್ಯಕ್ರಮದಡಿ ಕನಿಷ್ಠ 30 ರಾಷ್ಟ್ರಗಳ 500 ವಿಮಾನಗಳ ಪ್ರಯಾಣಿಕರನ್ನು ವಿಶೇಷವಾಗಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅದರಲ್ಲಿ ಬಹುಪಾಲು ಚೀನಾ ಮೂಲದ ಮತ್ತು ನೆರೆಯ ರಾಷ್ಟ್ರಗಳ ವಿಮಾನಗಳು ಸೇರಿವೆ.

ಚೀನಾ, ಹಾಂಗ್‌ಕಾಂಗ್ ಮತ್ತು ಮಕಾವ್‌ನಿಂದ ಅಮೆರಿಕ ಪ್ರಯಾಣ ಕೈಗೊಳ್ಳುವವರು ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT