ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19: ಭಾರತದಲ್ಲೇ ಉಳಿದಿರುವ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳಲು ಚೀನಾ ಯತ್ನ

Last Updated 16 ಜುಲೈ 2022, 3:09 IST
ಅಕ್ಷರ ಗಾತ್ರ

ಬೀಜಿಂಗ್‌: ಕೋವಿಡ್‌–19 ಸಾಂಕ್ರಾಮಿಕದ ಕಾರಣಕ್ಕೆ ಹೇರಲಾಗಿದ್ದ ವೀಸಾ ನಿರ್ಬಂಧಗಳಿಂದಾಗಿ ಭಾರತದಲ್ಲೇ ಉಳಿದಿರುವ ವಿದ್ಯಾರ್ಥಿಗಳನ್ನು ಚೀನಾಕ್ಕೆ ಕರೆಸಿಕೊಳ್ಳುವ ಮತ್ತು ಅವರು ವ್ಯಾಸಂಗ ಮಾಡುತ್ತಿದ್ದ ಕಾಲೇಜುಗಳಲ್ಲಿ ಪುನಃ ದಾಖಲಾತಿ ಒದಗಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ಮಾಡಲಾಗತ್ತಿದೆ ಎಂದು ಚೀನಾ ಶುಕ್ರವಾರ ಹೇಳಿದೆ.

ಈನಿಟ್ಟಿನಲ್ಲಿ ಚೀನಾ ಮತ್ತು ಭಾರತದ ಸಂಬಂಧಪಟ್ಟ ಇಲಾಖೆಗಳು ಕೆಲಸ ಮಾಡುತ್ತಿವೆ. ಚೀನಾದಲ್ಲಿ ವ್ಯಾಸಂಗ ಮುಂದುವರೆಸಲು ಇಚ್ಛಿಸುವ ಭಾರತೀಯ ವಿದ್ಯಾರ್ಥಿಗಳ ಮೊದಲ ತಂಡವನ್ನು ಆದಷ್ಟು ಬೇಗ ಕರೆಸಿಕೊಳ್ಳುವ ಪ್ರಯತ್ನ ನಡೆದಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿಂಗ್‌ ಮಾಧ್ಯಮಗಳ ಎದುರು ಹೇಳಿದ್ದಾರೆ.

ಸುಮಾರು 23,000 ವಿದ್ಯಾರ್ಥಿಗಳು ಚೀನಾದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅವರಲ್ಲಿ ಹಲವರು ವೈದ್ಯಕೀಯ ವಿದ್ಯಾರ್ಥಿಗಳು. ಚೀನಾದಲ್ಲಿ ವ್ಯಾಸಂಗ ಮುಂದುವರೆಸಲು ಇಚ್ಛಿಸುತ್ತಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಭಾರತ ಈಗಾಗಲೇ ಚೀನಾಕ್ಕೆ ನೀಡಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT