ಶನಿವಾರ, ಜೂನ್ 12, 2021
24 °C

ಲಸಿಕೆ ಹಾಕಿಸಿದವರು ಮಾಸ್ಕ್ ಧರಿಸಬೇಕಿಲ್ಲ; ಅಮೆರಿಕದಲ್ಲಿ ಹೊಸ ಮಾರ್ಗಸೂಚಿ

ಪಿಟಿಐ‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಮೀರಿಸಿ ಅಮೆರಿಕ ಸಹಜ ಜೀವನಕ್ಕೆ ಮರಳುವತ್ತ ಸ್ಪಷ್ಟ ಸೂಚನೆ ರವಾನಿಸಿದ್ದು, ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡ ಜನರು ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ಸೂಚಿಸಿದೆ.

ಹೊರಾಂಗಣ ಮತ್ತು ಒಳಾಂಗಣ ಎರಡೂ ಕಡೆ ಇದು ಅನ್ವಯವಾಗಲಿದೆ. ಸಿಡಿಸಿ ಸಲಹೆಯ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾಸ್ಕ್ ಧರಿಸದೆಯೇ ಶ್ವೇತಭವನದ ರೋಸ್ ಗಾರ್ಡನ್‌ನಲ್ಲಿ ವರದಿಗಾರರ ಮುಂದೆ ಹಾಜರಾಗಿದ್ದಾರೆ.

'ಇದೊಂದು ದೊಡ್ಡ ಮೈಲಿಗಲ್ಲು ಎಂದು ನಾನು ಭಾವಿಸುತ್ತೇನೆ. ಅಮೆರಿಕನ್ನರಿಗೆ ಆದಷ್ಟು ಬೇಗ ಲಸಿಕೆ ಹಾಕುವಲ್ಲಿ ನಾವು ಪಡೆದ ಯಶಸ್ಸಿನಿಂದಾಗಿ ಇದು ಸಾಧ್ಯವಾಗಿದೆ' ಎಂದು ಬೈಡನ್ ತಿಳಿಸಿದ್ದಾರೆ.

ಇದನ್ನೂ ಓದಿ: 

ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡ ಜನರು ಮಾಸ್ಕ್ ಧರಿಸದೇ ಅಥವಾ ದೈಹಿಕ ಅಂತರ ಕಾಪಾಡಿಕೊಳ್ಳದೇ ಚುಟುವಟಿಕೆಗಳನ್ನು ಪುನರಾರಂಭಿಸಬಹುದು. ಅಮೆರಿಕದೊಳಗೆ ಸಂಚರಿಸುವ ಪ್ರಯಾಣಿಕರು ಪ್ರಯಾಣದ ಮೊದಲು ಅಥವಾ ನಂತರ ಮತ್ತು ಕ್ವಾರೈಂಟನ್‌ಗೆ ಒಳಗಾಗುವ ಅಗತ್ಯವಿಲ್ಲ. ವಿಶೇಷವಾಗಿಯೂ ತೀವ್ರ ಅನಾರೋಗ್ಯ ಹಾಗೂ ಸಾವನ್ನು ತಡೆಗಟ್ಟುವಲ್ಲಿ ಲಸಿಕೆ ಪರಿಣಾಮಕಾರಿಯೆನಿಸಿದೆ. ಇದು ಕೋವಿಡ್-19 ಹರಡುವ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ.

ಸಿಡಿಸಿ ಮಾರ್ಗಸೂಚಿಯನ್ನು ಉಲ್ಲೇಖಿಸಿರುವ ಬೈಡನ್, ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡ ಜನರು ಕೊರೊನಾ ಸೋಂಕು ತಗುಲುವ ಅತ್ಯಂತ ಕಡಿಮೆ ಅಪಾಯ ಹೊಂದಿರುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 

ಹಾಗಾಗಿ ನೀವು ಸಂಪೂರ್ಣವಾಗಿ ಲಸಿಕೆ ಪಡೆದಿದ್ದರೆ ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ. ಆದರೆ ಲಸಿಕೆ ಹಾಕಿಸಿಕೊಳ್ಳದಿದ್ದರೆ ಅಥವಾ ಮೊದಲ ಡೋಸ್ ಮಾತ್ರ ಹಾಕಿಸಿದ್ದರೆ ಮಾಸ್ಕ್ ಧರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
 

ಅಮೆರಿಕದಲ್ಲಿ 114 ದಿನಗಳಲ್ಲಿ 250 ದಶಲಕ್ಷ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ನಾವಿದರ ಫಲಿತಾಂಶವನ್ನು ನೋಡುತ್ತಿದ್ದೇವೆ. 50 ಸ್ಟೇಟ್‌ಗಳ ಪೈಕಿ 49ರಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗಿವೆ. ಒಂದು ವರ್ಷದ ಹಿಂದೆ ಸಾಂಕ್ರಾಮಿಕ ರೋಗದ ಪ್ರಾರಂಭದ ನಂತರ ಅಂದರೆ 2020 ಎಪ್ರಿಲ್‌ನಿಂದ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಸಾವಿನ ಪ್ರಮಾಣ ಶೇಕಡಾ 80ರಷ್ಟು ಕಡಿಮೆಯಾಗಿದ್ದು, ಎಪ್ರಿಲ್ 2020ರ ನಂತರ ಅತ್ಯಂತ ಕಡಿಮೆ ಮಟ್ಟದಲ್ಲಿದೆ ಎಂದು ಬೈಡನ್ ವಿವರಿಸಿದ್ದಾರೆ.

 

ಇತರೆ ದೇಶಗಳಲ್ಲಿ ವೈರಸ್ ದುರಂತವಾಗಿ ಮಾರ್ಪಾಟ್ಟಿದೆ. ನಾಲ್ಕು ತಿಂಗಳೊಳಗೆ ನಾವು ಅಮೆರಿಕದಲ್ಲಿ ಶೇಕಡಾ 5ರಿಂದ ಶೇಕಡಾ 60ರಷ್ಟು ವಯಸ್ಕರಿಗೆ ಕನಿಷ್ಠ ಒಂದು ಡೋಸ್ ನೀಡಿದ್ದೇವೆ. ಆರ್ಥಿಕತೆಯು ನಿಶ್ಚಲತೆಯಿಂದ ಕಳೆದ 40 ವರ್ಷಗಳಲ್ಲೇ ವೇಗವಾಗಿ ಪ್ರಗತಿಯತ್ತ ಸಾಗುತ್ತಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು