ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಮದುವೆ ಕಾರ್ಯಕ್ರಮಗಳಿಗಾಗಿ ಹೊಸ ಮಾರ್ಗಸೂಚಿ ಬಿಡುಗಡೆ

Last Updated 9 ನವೆಂಬರ್ 2020, 7:17 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಕಳೆದ 24 ಗಂಟೆಗಳಲ್ಲಿ 1,650 ಹೊಸ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 3,44,839ಕ್ಕೆ ತಲು‍ಪಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ನ ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಸರ್ಕಾರವು ಮದುವೆ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಈ ಮಾರ್ಗಸೂಚಿಯಡಿ ಮದುವೆ ಮನೆಯವರು ಮತ್ತು ಅತಿಥಿಗಳೆಲ್ಲರೂ ಮುಖಗವಸು ಧರಿಸುವುದು ಕಡ್ಡಾಯ. ಸಭಾಂಗಣ ಪ್ರವೇಶಿಸುವ ಮುನ್ನ ಕಡ್ಡಾಯವಾಗಿ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಬೇಕು. ಮಧ್ಯಾಹ್ನದ ಊಟಕ್ಕಾಗಿ ಬಫೆ ಸೇವೆಗಳನ್ನು ನಿಷೇಧಿಸಲಾಗಿದ್ದು, ಅತಿಥಿಗಳ ಟೇಬಲ್‌ಗಳಿಗೆ ಆಹಾರ ಬಡಿಸಬೇಕು. ಅಲ್ಲದೆ ಅತಿಥಿಗಳ ನಡುವೆ 6 ಅಡಿ ಅಂತರವಿರಬೇಕು. ಮದುವೆ ಆಯೋಜಕರು ಪ್ರತಿಯೊಬ್ಬ ಅತಿಥಿಗಳ ಹೆಸರು ಮತ್ತು ವಿಳಾಸವನ್ನು ಬರೆದುಕೊಂಡಿರಬೇಕು.

ಕಳೆದ 24 ಗಂಟೆಗಳಲ್ಲಿ ಕೋವಿಡ್‌ನಿಂದಾಗಿ 9 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ ಒಟ್ಟು 6,977ಕ್ಕೆ ಏರಿಕೆಯಾಗಿದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಆರೋಗ್ಯ ಸೇವೆಗಳ ಸಚಿವಾಲಯವು ಮಾಹಿತಿ ನೀಡಿದೆ.

ಪಾಕಿಸ್ತಾನದಲ್ಲಿಈವರೆಗೆ 3,18,881 ಮಂದಿ ಸೋಂಕಿನಿಂದ ಗುಣಮಖರಾಗಿದ್ದು, 972 ರೋಗಿಗಳ ಸ್ಥಿತಿ ಬಹಳ ಗಂಭೀರವಾಗಿದೆ. 18,981 ಸಕ್ರಿಯ ಪ್ರಕರಣಗಳಿವೆ. ಸೆಪ್ಟೆಂಬರ್‌ ತಿಂಗಳಿನಲ್ಲಿ ಸೋಂಕಿತರ ಸಂಖ್ಯೆ 6,000 ಕ್ಕೆ ಇಳಿದಿತ್ತು ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT