ಭಾನುವಾರ, ಸೆಪ್ಟೆಂಬರ್ 26, 2021
22 °C

Covid-19 World Update: ಬ್ರೆಜಿಲ್, ಭಾರತದಲ್ಲಿ ಅತಿಹೆಚ್ಚು ಸೋಂಕಿತರು ಗುಣಮುಖ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Covid-19

ನ್ಯೂಯಾರ್ಕ್‌: ಜಗತ್ತಿನಾದ್ಯಂತ ಕೋವಿಡ್–19 ಸೋಂಕಿನಿಂದ ಇದುವರೆಗೆ ಒಟ್ಟು 1.51 ಕೋಟಿ ಸೋಂಕಿತರು ಗುಣಮುಖರಾಗಿದ್ದಾರೆ. ಬ್ರೆಜಿಲ್‌ ಹಾಗೂ ಭಾರತದಲ್ಲಿ ಕ್ರಮವಾಗಿ 29.48 ಲಕ್ಷ ಮತ್ತು 23.38 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಜಾನ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ವೈರಸ್‌ ರಿಸೋರ್ಸ್‌ ಸೆಂಟರ್ ಮಾಹಿತಿ ನೀಡಿದೆ.

ಅತಿ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಷ್ಟ್ರಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ ಇದುವರೆಗೆ ಒಟ್ಟು 36,05,783 ಸೋಂಕು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 29,48,815 ಸೋಂಕಿತರು ಮೃತಪಟ್ಟಿದ್ದಾರೆ. ಉಳಿದಂತೆ 1,14,744 ಮಂದಿ ಮೃತಪಟ್ಟಿದ್ದಾರೆ.

ವಿವಿಯ ಮಾಹಿತಿ ಪ್ರಕಾರ ಬ್ರೆಜಿಲ್‌ ನಂತರದ ಸ್ಥಾನದಲ್ಲಿ ಭಾರತ ಇದೆ. ಭಾರತದಲ್ಲಿ ಈ ವರೆಗೆ ಒಟ್ಟು 31,06,348 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 23,38,035 ಮಂದಿ ಗುಣಮುಖರಾಗಿದ್ದಾರೆ. 57,542 ಮಂದಿ ಮೃತಪಟ್ಟಿದ್ದಾರೆ.

ಅಮೆರಿಕದಲ್ಲಿ ಇದುವರೆಗೆ ಒಟ್ಟು 57,06,449 ಸೋಂಕು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 19,97,761 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 1,76,819 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 

 

ಜಗತ್ತಿನಾದ್ಯಂತ ಇದುವರೆಗೆ ಒಟ್ಟು 2,34,72,067 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 8,09,747 ಮಂದಿ ಮೃತಪಟ್ಟಿದ್ದಾರೆ. ಹಾಗೂ 1,51,69,748 ಸೋಂಕಿತರು ಚೇತರಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು