ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯ ಸಿಬ್ಬಂದಿಗೆ ಕೋವಿಡ್ ಲಸಿಕೆ: ಭಾರತ ಘೋಷಣೆ

Last Updated 17 ಫೆಬ್ರುವರಿ 2021, 16:27 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯ ಸಿಬ್ಬಂದಿಗೆ ಕೋವಿಡ್–19 ಲಸಿಕೆ ನೀಡಲು ಸಿದ್ಧವಿರುವುದಾಗಿ ಭಾರತ ಹೇಳಿದೆ. ಶಾಂತಿಪಾಲನಾ ಪಡೆಯು ವಿಶ್ವದಾದ್ಯಂತ 12 ಘಟಕಗಳನ್ನು ಹೊಂದಿದ್ದು, ಸುಮಾರು 95,000 ಸಿಬ್ಬಂದಿ ಇದ್ದಾರೆ.

‘ಇಂಥ ಕಷ್ಟದ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವಸಂಸ್ಥೆಯ ಶಾಂತಿಪಾಲಕರನ್ನು ಗಮನದಲ್ಲಿಟ್ಟುಕೊಂಡು 2 ಲಕ್ಷ ಡೋಸ್ ಲಸಿಕೆ ನೀಡುವುದಾಗಿ ಘೋಷಿಸುತ್ತಿದ್ದೇವೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಹಾಗೂ ಸಂಘರ್ಷ ವಲಯಗಳಿಗೆ ಸಂಬಂಧಿಸಿ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಸಚಿವರು ಈ ಘೋಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT