ಸೋಮವಾರ, ಮೇ 23, 2022
30 °C

ರಷ್ಯಾ ಕೋವಿಡ್ ಲಸಿಕೆ ಸ್ಪುಟ್ನಿಕ್ ವಿಗೆ ಕೆಲವೇ ವಾರಗಳಲ್ಲಿ ಭಾರತದಲ್ಲಿ ಅನುಮೋದನೆ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Sputnik V. Credit: Reuters Photo

ಮಾಸ್ಕೊ: ರಷ್ಯಾದ ಕೋವಿಡ್ ಲಸಿಕೆ ‘ಸ್ಪುಟ್ನಿಕ್ ವಿ’ಗೆ ಮುಂದಿನ ಕೆಲವೇ ವಾರಗಳಲ್ಲಿ ಭಾರತದಲ್ಲಿ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂದು ಮಾಸ್ಕೊದಲ್ಲಿರುವ ಭಾರತೀಯ ರಾಯಭಾರಿ ಹೇಳಿಕೆ ಉಲ್ಲೇಖಿಸಿ ‘ಆರ್‌ಐಎ’ ಸುದ್ದಿಸಂಸ್ಥೆ ವರದಿ ಮಾಡಿದೆ.

‘ಸ್ಪುಟ್ನಿಕ್ ವಿ’ ಲಸಿಕೆಯ ಮಾನವ ಪ್ರಯೋಗಗಳು ಭಾರತದಲ್ಲಿ ನಡೆಯುತ್ತಿವೆ. ರಷ್ಯಾದ ನೇರ ಹೂಡಿಕೆ ನಿಧಿ (ಆರ್‌ಡಿಐಎಫ್‌) ಬೆಂಬಲದೊಂದಿಗೆ ‘ಡಾ. ರೆಡ್ಡೀಸ್‌ ಲ್ಯಾಬೊರೇಟರೀಸ್ ಲಿಮಿಟೆಡ್’ ಪ್ರಯೋಗ ನಡೆಸುತ್ತಿದೆ.

ಓದಿ: 

ಸ್ಪುಟ್ನಿಕ್-ವಿ ಕೋವಿಡ್‌ ಲಸಿಕೆಯು ಶೇ 91.6 ಪರಿಣಾಮಕಾರಿಯಾಗಿದೆ ಎಂದು 'ದಿ ಲ್ಯಾನ್ಸೆಟ್ ಇಂಟರ್‌ ನ್ಯಾಷನಲ್‌ ಮೆಡಿಕಲ್' ನಿಯತಕಾಲಿಕೆಯಲ್ಲಿ ಇತ್ತೀಚೆಗೆ ಹೇಳಲಾಗಿತ್ತು. ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶಗಳನ್ನು ವಿಶ್ಲೇಷಿಸಿ ವಿಜ್ಞಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು