ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾದಲ್ಲಿ ಮತ್ತೆ ಹೆಚ್ಚಿದ ಕೋವಿಡ್‌ ಪ್ರಕರಣ

Last Updated 30 ಸೆಪ್ಟೆಂಬರ್ 2021, 3:24 IST
ಅಕ್ಷರ ಗಾತ್ರ

ಮೆಲ್ಬರ್ನ್: ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದಲ್ಲಿ ಬುಧವಾರ ಒಂದೇ ದಿನ 1,438 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಹಿಂದಿನ ದಿನಕ್ಕಿಂತ ಹೊಸದಾಗಿ 500ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಆಸ್ಟ್ರೇಲಿಯಾದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿರುವ ವಿಕ್ಟೋರಿಯಾದಲ್ಲಿ ಮಂಗಳವಾರ 950 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದರು.

‘ವಿಕ್ಟೋರಿಯಾ ರಾಜ್ಯದಲ್ಲಿ ತಿಂಗಳ ಅಂತ್ಯದ ವೇಳೆಗೆ ಲಾಕ್‌ಡೌನ್ ನಿಯಮಗಳನ್ನು ಸಡಿಲಗೊಳಿಸುವ ಸಾಧ್ಯತೆ ಇದೆ’ ಎಂದು ಹೇಳಲಾಗುತ್ತಿದೆ.

ಕೋವಿಡ್‌ ದೈನಂದಿನ ಪ್ರಕರಣಗಳ ಸಂಖ್ಯೆ ಏರಿಕೆ ಬೆನ್ನಲ್ಲೇ ಲಸಿಕೆ ವಿತರಣೆಗೆ ಮತ್ತಷ್ಟು ವೇಗ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಕ್ಟೋರಿಯಾದಲ್ಲಿ ಇದುವವರೆಗೆ ಶೇ 49 ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಆಸ್ಟ್ರೇಲಿಯಾದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 105,131 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,290 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT