ಶನಿವಾರ, ಮೇ 15, 2021
25 °C

ಲಸಿಕೆ ಕಚ್ಚಾವಸ್ತು ರಫ್ತಿಗೆ ನಿಷೇಧ: ಸೀರಂ ಮನವಿಗೆ ಪ್ರತಿಕ್ರಿಯಿಸದ ಅಮೆರಿಕ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ‘ಕೋವಿಡ್‌‘ ಲಸಿಕೆ ಉತ್ಪಾದನೆ ಹೆಚ್ಚಿಸುವುದಕ್ಕಾಗಿ ಕೆಲವು ಕಚ್ಚಾವಸ್ತುಗಳ ಮೇಲಿನ ರಫ್ತು ನಿಷೇಧ ತೆಗೆಯುವಂತೆ ಭಾರತದ ಸೀರಂ ಇನ್‌ಸ್ಟಿಟ್ಯೂಟ್‌ ಮಾಡಿರುವ ಮನವಿ ಕುರಿತು ಪ್ರತಿಕ್ರಿಯೆ ನೀಡಲು ಅಮೆರಿಕ ನಿರಾಕರಿಸಿದೆ.

ಶ್ವೇತಭವನದಲ್ಲಿ ಸೋಮವಾರ ಬೆಳಿಗ್ಗೆ ಹಾಗೂ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಕಾರ್ಯದರ್ಶಿ ಜೇನ್‌ ಪ್ಸಕಿ ಅವರು ಪತ್ರಕರ್ತರು ಈ ವಿಷಯದಲ್ಲಿ ಮತ್ತೆ ಮತ್ತೆ ಪ್ರಶ್ನೆ ಕೇಳಿದರೂ ಯಾವುದೇ ರೀತಿಯಲ್ಲಿ ಸ್ಪಷ್ಟ ಉತ್ತರ ನೀಡಲಿಲ್ಲ.

‘ಕ್ಷಮಿಸಿ. ಈ ವಿಷಯಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ನಮ್ಮ ಬಳಿ ಮಾಹಿತಿ ಇಲ್ಲ. ಶೀಘ್ರದಲ್ಲೇ ನಾವು ಮತ್ತೆ ನಿಮ್ಮನ್ನು ಸಂಪರ್ಕಿಸುತ್ತೇವೆ‘ ಎಂದು ಫೌಸಿ ಹೇಳಿದರು.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು