ಸೋಮವಾರ, ಅಕ್ಟೋಬರ್ 26, 2020
26 °C

Covid-19 World Update: ಹತ್ತು ಲಕ್ಷದ ಸನಿಹ ತಲುಪಿದ ಕೋವಿಡ್ ಸಾವಿನ ಸಂಖ್ಯೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Covid-19 Test

ವಾಷಿಂಗ್ಟನ್: ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಸೋಮವಾರ ಮುಂಜಾನೆ ವೇಳೆಗೆ 9,59,059 ತಲುಪಿದೆ. 3.09 ಕೋಟಿಗೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಈವರೆಗೆ 2 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ.

ಅಮೆರಿಕ, ಬ್ರಿಟನ್, ಬ್ರೆಜಿಲ್ ಸೇರಿದಂತೆ ಅನೇಕ ದೇಶಗಳಲ್ಲಿ ಸೋಂಕಿನ ಹರಡುವಿಕೆ ಮತ್ತೆ ಹೆಚ್ಚಾಗಿದೆ. ಬೆಲ್ಜಿಯಂನಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದೆ.

ಆಸ್ಟ್ರೇಲಿಯಾದಲ್ಲಿ ಹೊಸದಾಗಿ 14 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ದಿನವೊಂದರ ಅತಿ ಕಡಿಮೆ ಪ್ರಕರಣಗಳಾಗಿವೆ. ಮೆಲ್ಬರ್ನ್‌ನಲ್ಲಿ ಕಳೆದ 3 ತಿಂಗಳುಗಳಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿದ್ದು, ಇದರ ಪರಿಣಾಮ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ.

ಇದನ್ನೂ ಓದಿ: 

ಕೋವಿಡ್–19 ಲಸಿಕೆ ಖರೀದಿ, ವಿತರಣೆಗೆ ಸಂಬಂಧಿಸಿ ಜಾಗತಿಕ ಮೈತ್ರಿಕೂಟದೊಂದಿಗೆ ಸೇರಿಕೊಳ್ಳುವುದಾಗಿ ಬ್ರೆಜಿಲ್ ಮತ್ತು ಅರ್ಜೆಂಟೀನಾ ಹೇಳಿಕೊಂಡಿವೆ.

ಕಠಿಣ ಲಾಕ್‌ಡೌನ್ ನಿರ್ಬಂಧಗಳ ನಡುವೆಯೂ ಅದನ್ನು ವಿರೋಧಿಸಿ ಕೇಂದ್ರ ಲಂಡನ್‌ನಲ್ಲಿ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಅಗತ್ಯಬಿದ್ದಲ್ಲಿ ಮರಳಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸುವುದಾಗಿ ಅಲ್ಲಿನ ಸರ್ಕಾರ ಭಾನುವಾರ ಹೇಳಿತ್ತು.

ಅಮೆರಿಕದಲ್ಲಿ ಭಾನುವಾರ ಒಂದೇ ದಿನ 10 ಲಕ್ಷಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಅಲ್ಲಿ ಈವರೆಗೆ 67.96 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದು, 1.9 ಲಕ್ಷಕ್ಕೂ ಹೆಚ್ಚು ಜನ ಅಸುನೀಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು