ಶನಿವಾರ, ಅಕ್ಟೋಬರ್ 31, 2020
28 °C

Covid-19 World Update: ಸೋಂಕು ಹರಡುವಿಕೆ ಹೆಚ್ಚಳ, ನಿಯಮ ಬಿಗಿಗೊಳಿಸಿದ ಬ್ರಿಟನ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Coronavirus test

ಲಂಡನ್: ಕೊರೊನಾ ವೈರಸ್ ಸೋಂಕು ಹರಡುವಿಕೆಯ ಎರಡನೇ ಅಲೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಬ್ರಿಟನ್‌ ಸರ್ಕಾರವು ನಿಯಮಗಳನ್ನು ಬಿಗಿಗೊಳಿಸಲು ಮುಂದಾಗಿದೆ.

ಕೋವಿಡ್ ಹರಡದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಜನತೆ ಕೈಗೊಳ್ಳಲೇಬೇಕು. ಇಲ್ಲವಾದಲ್ಲಿ ಹೆಚ್ಚು ಮೊತ್ತದ ದಂಡ, ಮತ್ತೊಂದು ಅವಧಿಯ ಲಾಕ್‌ಡೌನ್‌ಗೆ ಸಿದ್ಧರಾಗಿ ಎಂದು  ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಒಂದೇ ದಿನ ಬ್ರಿಟನ್‌ನಲ್ಲಿ 4,926 ಮಂದಿಗೆ ಸೋಂಕು ತಗುಲಿತ್ತು. ಜಾನ್ಸ್‌ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ಪ್ರಕಾರ, ಬುಧವಾರ ಬೆಳಿಗ್ಗೆ ವೇಳೆಗೆ ಬ್ರಿಟನ್‌ನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,06,054 ತಲುಪಿದ್ದು, ಈವರೆಗೆ 41,951 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 

ವಿಶ್ವದಾದ್ಯಂತ ಈವರೆಗೆ 3.1 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, 9.67 ಲಕ್ಷಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.

ಲಸಿಕೆ ಸಹಭಾಗಿತ್ವದಲ್ಲಿ ಕೈಜೋಡಿಸದ ಅಮೆರಿಕ, ಚೀನಾ: ಭವಿಷ್ಯದಲ್ಲಿ ಕೋವಿಡ್–19 ಲಸಿಕೆಯ ನ್ಯಾಯಸಮ್ಮತ ವಿತರಣೆಗಾಗಿ ಹಮ್ಮಿಕೊಳ್ಳಲಾಗಿರುವ ಯೋಜನೆಗೆ ಅಮೆರಿಕ ಹಾಗೂ ಚೀನಾ ಕೈಜೋಡಿಸಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತಿಳಿಸಿದೆ. ಈವರೆಗೆ 156 ದೇಶಗಳು ಯೋಜನೆಗೆ ಸೇರ್ಪಡೆಯಾಗಿವೆ.

ಅಮೆರಿಕದಲ್ಲಿ ಈವರೆಗೆ 68.9 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಮೃತಪಟ್ಟವರ ಸಂಖ್ಯೆ 2 ಲಕ್ಷ ದಾಟಿದೆ.

ಭಾರತದಲ್ಲಿ ಕಳೆದ ನಾಲ್ಕು ದಿನಗಳಿಂದ ಸೋಂಕಿಗೆ ತುತ್ತಾಗುತ್ತಿರುವವರಿಗಿಂತಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು