ಮಂಗಳವಾರ, ಅಕ್ಟೋಬರ್ 27, 2020
22 °C

Covid-19 World update: 3.87 ಕೋಟಿ ಸೋಂಕಿತರು, 2ನೇ ಅಲೆ ಭೀತಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಪ್ಯಾರಿಸ್‌: ಜಾಗತಿಕವಾಗಿ ಕೊರೊನಾ ವೈರಸ್ ಸೋಂಕು ಹರಡುವಿಕೆ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ ಫ್ರಾನ್ಸ್‌ನಲ್ಲಿ ಎರಡನೇ ಅಲೆ ಪ್ರಭಾವ ಬೀರುತ್ತಿರುವುದರಿಂದ ಕರ್ಫ್ಯೂ ಘೋಷಿಸಲಾಗಿದೆ.

ಜುಲೈನಿಂದ ಫ್ರಾನ್ಸ್‌ನಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿರುವುದರಿಂದ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮಾಕ್ರಾನ್‌ ಕರ್ಫ್ಯೂ ಘೋಷಿಸಿದ್ದಾರೆ. ಪ್ಯಾರಿಸ್‌ ಸೇರಿದಂತೆ ಹಲವು ನಗರಗಳಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.

ಭಾರತ, ಅಮೆರಿಕ, ಬ್ರೆಜಿಲ್‌, ಸ್ಪೇನ್‌ನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 680 ಜನರು ಮೃತಪಟ್ಟಿದ್ದಾರೆ.

ವರ್ಡೊ ಮೀಟರ್‌ ವೆಬ್‌ಸೈಟ್ ಮಾಹಿತಿ ಪ್ರಕಾರ, ಈವರೆಗೆ ವಿಶ್ವದಾದ್ಯಂತ 3,87,70,004 ಜನ ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 10,97,288 ಜನರು ಮೃತಪಟ್ಟಿದ್ದಾರೆ. 2,91,39,140 ಜನರು ಗುಣಮುಖರಾಗಿದ್ದಾರೆ. 85,33,576 ಜನರು ಜಾಗತಿಕ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ 81,50,043 ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ 73,07,097 ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್‌ನಲ್ಲಿ 51,41,498ಪ್ರಕರಣಗಳು ದಾಖಲಾಗಿವೆ.

ರಷ್ಯಾದಲ್ಲಿ 13,54,163, ಸ್ಪೆನ್‌ 9,37,311, ಪೆರುವಿನಲ್ಲಿ 8,56,951 ಮತ್ತು ಮೆಕ್ಸಿಕೊದಲ್ಲಿ 8,29,396 ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು