ಸೋಮವಾರ, ನವೆಂಬರ್ 30, 2020
19 °C

Covid-19 World Update | 5,37 ಕೋಟಿ ಪ್ರಕರಣ, ಅಮೆರಿಕದಲ್ಲಿ ಏಪ್ರಿಲ್‌ಗೆ ಲಸಿಕೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಮುಂದಿನ ವರ್ಷ ಏಪ್ರಿಲ್‌ ವೇಳೆಗೆ ಅಮೆರಿಕದ ಸಾಮಾನ್ಯ ಜನರಿಗೂ ಫೀಜರ್‌ ಕೋವೀಡ್‌ ಲಸಿಕೆ ಲಭ್ಯವಾಗಲಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶನಿವಾರ ಹೇಳಿದ್ದಾರೆ.

ಅಧ್ಯಕ್ಷೀಯ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಮಾತನಾಡಿದ ಅವರು ಕೋವಿಡ್‌ ಲಸಿಕೆ ಕುರಿತಂತೆ ಮಾಹಿತಿ ನೀಡಿದರು.

ಆರಂಭದಲ್ಲಿ ಕೊರೊನಾ ವಾರಿಯರ್ಸ್‌ಗಳು ಹಾಗೂ ವೃದ್ಧರಿಗೆ ನೀಡಲಾಗುವುದು. ಇದು ಸಂಪೂರ್ಣವಾಗಿ ಉಚಿತವಾಗಿರಲಿದೆ ಎಂದು ಟ್ರಂಪ್‌ ಶ್ವೇತಭವನದಲ್ಲಿ ತಿಳಿಸಿದರು. 

ಅಮೆರಿಕದಲ್ಲಿ ಶುಕ್ರವಾರ ಒಂದೇ ದಿನ 1, 57,000 ಹೊಸ ಪ್ರಕರಣಗಳು ವರದಿಯಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಗುರುವಾರ ಕೂಡ 1.60 ಲಕ್ಷ ಹೊಸ ಪ್ರಕರಣಗಳು ವರದಿಯಾಗಿದ್ದವು. ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ  ಕೆಲ ತಜ್ಞರು ಲಾಕ್‌ಡೌನ್‌ ಮಾಡುವಂತೆ ಸಲಹೆ ನೀಡುತ್ತಿದ್ದಾರೆ.

ಜಗತ್ತಿನ ವಿವಿಧ ದೇಶಗಳಲ್ಲಿ ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ (ಭಾರತೀಯ ಕಾಲಮಾನ) ಒಟ್ಟು 5,37,39,919 ಸೋಂಕು ಪ್ರಕರಣಗಳು ವರದಿಯಾಗಿದ್ದವು. ಈವರೆಗೆ ಒಟ್ಟು 13,09,176 ಮಂದಿ ಸಾವಿಗೀಡಾಗಿದ್ದಾರೆ. 3,75,20,343 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು 1,49,10,400 ಪ್ರಕರಣಗಳು ಸಕ್ರಿಯವಾಗಿವೆ ಎಂದು ವರ್ಡೋಮೀಟರ್‌ ವರದಿ ಮಾಡಿದೆ.

ಅಮೆರಿಕದಲ್ಲಿ ಅತಿಹೆಚ್ಚು, ಅಂದರೆ ಒಟ್ಟು 1,10,64,364 ಸೋಂಕು ಪ್ರಕರಣಗಳು ವರದಿಯಾಗಿವೆ. ಅಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 2,49,975. ಒಟ್ಟು 67,89,146 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ವಿಶ್ವದಲ್ಲಿ 2ನೇ ಅತಿಹೆಚ್ಚು ಸೋಂಕಿತರಿರುವ ಭಾರತದಲ್ಲಿ ಒಟ್ಟು 8,773,243 ಸೋಂಕು ಪ್ರಕರಣಗಳು ವರದಿಯಾಗಿವೆ. 129,225 ಮಂದಿ ಮೃತಪಟ್ಟಿದ್ದಾರೆ.8,161,467 ಮಂದಿ ಚೇತರಿಸಿಕೊಂಡಿದ್ದಾರೆ.

ಬ್ರೆಜಿಲ್‌ನಲ್ಲಿ 58,19,496, ಫ್ರಾನ್ಸ್‌ 19,22,504, ರಷ್ಯಾ 18,80,551 ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು