ಮಂಗಳವಾರ, ನವೆಂಬರ್ 24, 2020
23 °C

Covid-19 World Update | 4.12 ಕೋಟಿ ಜನರಿಗೆ ಸೋಂಕು, 11,32,504 ಜನ ಸಾವು

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Coronavirus

ರಿಯೊ ಡಿ ಜನೈರೊ(ಬ್ರೆಜಿಲ್‌): ಜಗತ್ತಿನಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ 4.12 (4,12,69,142) ಕೋಟಿ ಮೀರಿದೆ. ಈವರೆಗೂ ಸೋಂಕಿನಿಂದ 11,32,504 ಮಂದಿ ಮೃತಪಟ್ಟಿದ್ದಾರೆ.

ಲ್ಯಾಟಿನ್‌ ಅಮೆರಿಕ ರಾಷ್ಟ್ರಗಳ ಪೈಕಿ ಬ್ರೆಜಿಲ್‌ನಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿವೆ. ಬ್ರೆಜಿಲ್‌ನಲ್ಲಿ ಒಟ್ಟು 52,76,942 ಕೋವಿಡ್‌ ಪ್ರಕರಣಗಳಿದ್ದು, ಅಲ್ಲಿ 1,54,906 ಮಂದಿ ಮೃತಪಟ್ಟಿದ್ದಾರೆ. ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅದು ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೊರೊನಾ ಒಂದಿಷ್ಟು ತಿಳಿಯೋಣ: ಕೋವಿಡ್‌ನಿಂದ ಮಿದುಳಿಗೂ ಹಾನಿ ಸಂಭವ

ವಿಶ್ವದಲ್ಲಿ ಈ ವರೆಗೆ 3,07,71,153 ಮಂದಿ ಗುಣಮುಖರಾಗಿದ್ದಾರೆ ಹಾಗೂ 93,65,485 ಸಕ್ರಿಯ ಪ್ರಕರಣಗಳಿವೆ. ಈ ಕುರಿತು ಕೋವಿಡ್‌ ಟ್ರ್ಯಾಕರ್‌ ವರ್ಲ್ಡೋಮೀಟರ್‌ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ವಿಶ್ವದಲ್ಲೇ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ. ಅಲ್ಲಿ ಒಟ್ಟು 85,29,351 ಮಂದಿಗೆ ಸೋಂಕು ತಗುಲಿದ್ದರೆ, 2,26,383 ಮಂದಿ ಈವರೆಗೆ ಮೃತಪಟ್ಟಿದ್ದಾರೆ.

ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಎರಡನೇ ರಾಷ್ಟ್ರ ಭಾರತವಾಗಿದ್ದು, ಇಲ್ಲಿ, ಈವರೆಗೆ 77,01,365 ಮಂದಿಗೆ ಸೋಂಕು ತಗುಲಿದೆ. 1,16,585 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ರಷ್ಯಾದಲ್ಲಿ 14,47,335 ಪ್ರಕರಣಗಳು, 24,952 ಮಂದಿ ಮೃತಪಟ್ಟಿದ್ದಾರೆ. ಕೊಲಂಬಿಯಾದಲ್ಲಿ 9,74,139 ಪ್ರಕರಣಗಳು ಹಾಗೂ 29,272 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು