ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 world update: 188 ದೇಶಗಳಲ್ಲಿ 2.42 ಕೋಟಿ ಸೋಂಕಿತರು

Last Updated 27 ಆಗಸ್ಟ್ 2020, 14:29 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ‌: 2020ರ ಆರಂಭದಲ್ಲಿ ಚೀನಾದ ಉಹಾನ್‌ನಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್‌ ಈಗ ಇಡೀ ಜಗತ್ತಿನ 188 ದೇಶಗಳನ್ನು ಆವರಿಸಿಕೊಂಡಿದ್ದು, ಒಟ್ಟು 2,42,06,817 ಮಂದಿಗೆ ಸೋಂಕು ಹರಡಿದೆ.

ವಿಶ್ವದಾದ್ಯಂತ 8,26,591 ಜನರು ಈ ಕಾಯಿಲೆಗೆ ಬಲಿಯಾಗಿದ್ದಾರೆ. ಇನ್ನುಳಿದಂತೆ 1,58,35,047 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಕೊರೊನಾ ಸಂಪನ್ಮೂಲ ಕೇಂದ್ರ ಮಾಹಿತಿ ನೀಡಿದೆ.

ಜಗತ್ತಿನಲ್ಲಿ ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಈ ವರೆಗೆ 58,24,189 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಲ್ಲಿ 20,84,465 ಸೋಂಕಿತರು ಗುಣಮುಖರಾಗಿದ್ದು, 1,79,756 ಮಂದಿ ಮೃತಪಟ್ಟಿದ್ದಾರೆ.

ಅಮೆರಿಕ ನಂತರ ಹೆಚ್ಚು ಪ್ರಕರಣಗಳು ವರದಿಯಾದ ರಾಷ್ಟ್ರಗಳ ಸಾಲಿನಲ್ಲಿರುವ ಬ್ರೆಜಿಲ್‌ನಲ್ಲಿ 37,17,156 ಪ್ರಕರಣಗಳು ಬೆಳಕಿಗೆ ಬಂದಿವೆ. 30,82,447 ಸೋಂಕಿತರು ಗುಣಮುಖರಾಗಿದ್ದು1,17,665 ಜನರು ಮೃತಪಟ್ಟಿದ್ದಾರೆ.

ರಷ್ಯಾದಲ್ಲಿ 9,72,972ದಕ್ಷಿಣ ಆಫ್ರಿಕಾದಲ್ಲಿ6,15,701, ಪೆರುವಿನಲ್ಲಿ 6,07,382, ಮೆಕ್ಸಿಕೋದಲ್ಲಿ 5,73,888 ಸ್ಪೇನ್‌ನಲ್ಲಿ 4,19,849, ಚಿಲಿಯಲ್ಲಿ 4,02,365, ಇಂಗ್ಲೆಂಡ್‌ನಲ್ಲಿ 3,30,967 ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ...
ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 75,760 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 1,023 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 33,10,235ಕ್ಕೆ ಏರಿಕೆಯಾಗಿದ್ದು, 25,23,772 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 60,472 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ದೇಶದಲ್ಲಿ 7,25,991 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿನ ತೀವ್ರತೆ ಪಟ್ಟಿಯಲ್ಲಿ ಜಾಗತಿಕವಾಗಿ ಭಾರತ ಮೂರನೇ ಸ್ಥಾನದಲ್ಲಿದೆ.

ಎಲ್ಲ ಬಗೆಯಕೊರೊನಾ ವೈರಸ್‌ಗೆ ಲಸಿಕೆ: ಪ್ರಯೋಗ

ಕೋವಿಡ್‌–19 ವಿರುದ್ಧ ಮಾತ್ರವಲ್ಲದೆ ಭವಿಷ್ಯದಲ್ಲಿ ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದಾದ ಎಲ್ಲಾ ಬಗೆಯ ಕೊರೊನಾ ವೈರಸ್‌ಗಳಿಗೆ ಪ್ರತಿಯಾಗಿ ಹೊಸ ಲಸಿಕೆ‌ಯನ್ನು ಅಭಿವೃದ್ಧಿಪಡಿಸುವ ಪ್ರಯೋಗವನ್ನು ಕೇಂಬ್ರಿಡ್ಜ್‌ ವಿವಿ ಬುಧವಾರ ಆರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT