ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World update: ಜಗತ್ತಿನಾದ್ಯಂತ 3.02 ಕೋಟಿಗೂ ಹೆಚ್ಚು ಮಂದಿ ಗುಣಮುಖ

Last Updated 19 ಅಕ್ಟೋಬರ್ 2020, 16:46 IST
ಅಕ್ಷರ ಗಾತ್ರ

ಬೆಂಗಳೂರು: ಅಮೆರಿಕ, ಭಾರತ ಮತ್ತು ಬ್ರೆಜಿಲ್‌ ಮೂರು ರಾಷ್ಟ್ರಗಳಿಂದಲೇ ಕೋವಿಡ್‌–19 ಪ್ರಕರಣಗಳ ಸಂಖ್ಯೆ 2 ಕೋಟಿ ದಾಟಿದೆ. ಇತ್ತೀಚೆಗೆ ಯುರೋಪ್‌ನ ರಾಷ್ಟ್ರಗಳಲ್ಲಿಯೂ ಸೋಂಕು ಹೆಚ್ಚಳವಾಗಿದೆ.

ಜಗತ್ತಿನಾದ್ಯಂತ 4.04 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 11.20 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ವರ್ಡೊ ಮೀಟರ್‌ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ಈವರೆಗೆ ಜಗತ್ತಿನಾದ್ಯಂತ 3.02 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 91.08 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ಸಕ್ರಿಯವಾಗಿವೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 27,05,539 ಸಕ್ರಿಯ ಪ್ರಕರಣಗಳಿವೆ. ಈವರೆಗೂ 2,24,824 ಮಂದಿ ಸಾವಿಗೀಡಾಗಿದ್ದಾರೆ. 54,63,410 ಜನರು ಚೇತರಿಸಿಕೊಂಡಿದ್ದಾರೆ.

ಸೋಂಕು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ 7,50,132 ಸಕ್ರಿಯ ಪ್ರಕರಣಗಳು, ಬ್ರೆಜಿಲ್‌ನಲ್ಲಿ 4,33,949 ಹಾಗೂ ಫ್ರಾನ್ಸ್‌ನಲ್ಲಿ 7,58,861 ಸಕ್ರಿಯ ಪ್ರಕರಣಗಳಿವೆ.

ಕೊರೊನಾ ವೈರಸ್ ವಿರುದ್ಧ ಪ್ರಯೋಗ ಹಂತದಲ್ಲಿರುವ ಲಸಿಕೆಯ ತುರ್ತು ಬಳಕೆಯನ್ನು ಚೀನಾ ಮೂರು ನಗರಗಳಿಗೆ ವಿಸ್ತರಿಸಿದೆ. ಲಸಿಕೆ ಪೂರೈಕೆಗೆ ಸಂಬಂಧಿಸಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ರಚಿಸಿರುವ ‘ಕೊವಾಕ್ಸ್ ಮೈತ್ರಿ’ಗೆ ಸೇರ್ಪಡೆಯಾದ ಬೆನ್ನಲ್ಲೇ ಚೀನಾ ಈ ಕ್ರಮ ಕೈಗೊಂಡಿದೆ.

ಪೂರ್ವ ಚೀನಾದ ಝೆಜಿಯಾಂಗ್ ಪ್ರಾಂತ್ಯದ ಮೂರು ನಗರಗಳಿಗೆ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ. ಯಿವು, ನಿಂಗ್ಬೊ ಮತ್ತು ಶಾವೊಕ್ಸಿಂಗ್ ನಗರದ ಆರೋಗ್ಯ ಅಧಿಕಾರಿಗಳು ಸೇರಿದಂತೆ ಹೆಚ್ಚಿನ ಅಪಾಯವುಳ್ಳವರಿಗೆ ಆದ್ಯತೆ ಮೇರೆಗೆ ಮೊದಲು ಲಸಿಕೆ ನೀಡಲಾಗುವುದು. ನಂತರ ನಾಗರಿಕರಿಗೂ ನೀಡಲಾಗುವುದು ಎಂದು ವರದಿ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT