ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid 19 World Update: 6.95 ಕೋಟಿಗೂ ಅಧಿಕ ಪ್ರಕರಣ

Last Updated 10 ಡಿಸೆಂಬರ್ 2020, 16:43 IST
ಅಕ್ಷರ ಗಾತ್ರ

ವಾಷಿಂಗ್ಟನ್: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 6.95ಕೋಟಿ ಕೋವಿಡ್–19 ಸೋಂಕು ಪ್ರಕರಣಗಳು ವರದಿಯಾಗಿದ್ದು, 4.82 ಕೋಟಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ದತ್ತಾಂಶಗಳಿಂದ ತಿಳಿದುಬಂದಿದೆ.

ಅತಿ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಈವರೆಗೆ 1.58ಕೋಟಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 92 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. 2.96 ಲಕ್ಷ ಮಂದಿ ಮೃತಪಟ್ಟಿದ್ದು, ಇನ್ನೂ ಸರಿ ಸುಮಾರು 63 ಲಕ್ಷ ಸಕ್ರಿಯ ಪ್ರಕರಣಗಳಿವೆ.

ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ 3.69ಲಕ್ಷ ಸಕ್ರಿಯ ಪ್ರಕರಣಗಳಿವೆ. ಬ್ರೆಜಿಲ್‌ನಲ್ಲಿ 6.54ಲಕ್ಷ, ರಷ್ಯಾದಲ್ಲಿ 4.9ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ಪ್ರಪಂಚದಾದ್ಯಂತ 15.81ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್‌ನಿಂದಾಗಿ ಈವರೆಗೆ ಮೃತಪಟ್ಟಿದ್ದಾರೆ. ಉಳಿದಂತೆ 1.97ಕೋಟಿ ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT