ಶುಕ್ರವಾರ, ಆಗಸ್ಟ್ 19, 2022
25 °C

Covid-19 World Updates: 7 ಕೋಟಿ ದಾಟಿದ ಸೋಂಕು ಪ್ರಕರಣಗಳ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಪ್ರಪಂಚದಾದ್ಯಂತ ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ 7 ಕೋಟಿ ದಾಟಿದೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿಮಾಡಿದೆ. ವೆಬ್‌ಸೈಟ್‌ ನೀಡಿರುವ ಅಂಕಿ–ಅಂಶದ ಪ್ರಕಾರ ಇದುವರೆಗೆ ಒಟ್ಟು 7.07 ಕೋಟಿ ಜನರಿಗೆ ಸೋಂಕು ತಗುಲಿದ್ದು, 4.91 ಕೋಟಿ ಮಂದಿ ಗುಣಮುಖರಾಗಿದ್ದಾರೆ.

ಅತಿ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಈವರೆಗೆ 1.60 ಕೋಟಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 93.30 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 2.99 ಲಕ್ಷ ಮಂದಿ ಮೃತಪಟ್ಟಿದ್ದು, ಇನ್ನೂ 64.08 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ. ಇದರಲ್ಲಿ 27,352 ಜನರ ಸ್ಥಿತಿ ಗಂಭೀರವಾಗಿದೆ.

ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 97.96 ಲಕ್ಷ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 1.40 ಲಕ್ಷ ಸೋಂಕಿತರು ಮೃತಪಟ್ಟು, 92.90 ಲಕ್ಷ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 3.64 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ.

ಬ್ರೆಜಿಲ್‌ನಲ್ಲಿ 67.83 ಲಕ್ಷ, ರಷ್ಯಾದಲ್ಲಿ 25.69 ಲಕ್ಷ, ಫ್ರಾನ್ಸ್‌ನಲ್ಲಿ 23.37 ಲಕ್ಷ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: 

15.88 ಲಕ್ಷ ಸೋಂಕಿತರ ಸಾವು
ಕೋವಿಡ್‌ನಿಂದಾಗಿ ಪ್ರಪಂಚದಾದ್ಯಂತ ಮೃತಪಟ್ಟವರ ಸಂಖ್ಯೆ 15.88 ಲಕ್ಷಕ್ಕೆ ಏರಿಕೆಯಾಗಿವೆ. ಇನ್ನೂ 1.99 ಕೋಟಿ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1.06 ಲಕ್ಷ ಸೋಂಕಿತರ ಸ್ಥಿತಿ ಗಂಭೀರವಾಗಿದೆ.

ಅಮೆರಿಕದಲ್ಲಿ ಅತಿಹೆಚ್ಚು (2.99 ಲಕ್ಷ) ಸಾವು ಸಂಭವಿಸಿದ್ದು, ಎರಡನೇ ಸ್ಥಾನದಲ್ಲಿ ಬ್ರೆಜಿಲ್‌ (1.79 ಲಕ್ಷ), ಮೂರನೇ ಸ್ಥಾನದಲ್ಲಿ ಭಾರತ (1.42 ಲಕ್ಷ) ಇದೆ. ಉಳಿದಂತೆ ಇಂಗ್ಲೆಂಡ್‌ (63 ಸಾವಿರ), ಇಟಲಿ (62 ಸಾವಿರ) ಹಾಗೂ ಫ್ರಾನ್ಸ್‌ನಲ್ಲಿ (56 ಸಾವಿರ) 50 ಸಾವಿರಕ್ಕಿಂತ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು