ವಾಷಿಂಗ್ಟನ್: ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳು 80 ಲಕ್ಷ ಸಮೀಪಿಸಿವೆ. ಸದ್ಯ ಅಮೆರಿಕದಲ್ಲಿ 79,33,656 ಕೋವಿಡ್ ಪ್ರಕರಣಗಳಿವೆ. ಈ ವರೆಗೆ 2,17,220 ಮಂದಿ ಮೃತಪಟ್ಟಿದ್ದಾರೆ.

ಒಟ್ಟಾರೆ ಜಗತ್ತಿನಲ್ಲಿ 3,86,20,496 ಪ್ರಕರಣಗಳು ದಾಖಲಾಗಿದ್ದು, ಈ ವರೆಗೆ 10,93,921 ಮಂದಿ ಮೃತಪಟ್ಟಿದ್ದಾರೆ.

ವಿಶ್ವದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಅಗ್ರ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಸದ್ಯ 73,07,097 ಪ್ರಕರಣಗಳು ದಾಖಲಾಗಿದ್ದು, 1,11,266 ಮಂದಿ ಮೃತಪಟ್ಟಿದ್ದಾರೆ.

ಬ್ರೆಜಿಲ್‌ನಲ್ಲಿ 51,40,863 ಪ್ರಕರಣಗಳಿದ್ದು, 1,51,747 ಮಂದಿ ಸಾವಿಗೀಡಾಗಿದ್ದಾರೆ. ರಷ್ಯಾದಲ್ಲಿ 13,46,380 ಸೋಂಕು ಪ್ರಕರಣಗಳಿವೆ. 23,350 ಮಂದಿ ಮೃತಪಟ್ಟಿದ್ದಾರೆ.

ಜಾಗತಿಕವಾಗಿ ಕೊರೊನಾ ವೈರಸ್ ಸೋಂಕು ಹರಡುವಿಕೆ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ ಫ್ರಾನ್ಸ್‌ನಲ್ಲಿ ಎರಡನೇ ಅಲೆ ಪ್ರಭಾವ ಬೀರುತ್ತಿರುವುದರಿಂದ ಕರ್ಫ್ಯೂ ಘೋಷಿಸಲಾಗಿದೆ.

ಜುಲೈನಿಂದ ಫ್ರಾನ್ಸ್‌ನಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿರುವುದರಿಂದ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮಾಕ್ರಾನ್ ಕರ್ಫ್ಯೂ ಘೋಷಿಸಿದ್ದಾರೆ. ಪ್ಯಾರಿಸ್ ಸೇರಿದಂತೆ ಹಲವು ನಗರಗಳಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.