ಮಂಗಳವಾರ, ಡಿಸೆಂಬರ್ 1, 2020
18 °C

Covid-19 World Update: ಜಗತ್ತಿನಾದ್ಯಂತ 1.18 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳು

ಎಎನ್‌ಐ‌ Updated:

ಅಕ್ಷರ ಗಾತ್ರ : | |

Covid

ಲಿಸ್ಬನ್: ವರ್ಲ್ಡೋಮೀಟರ್ ವೆಬ್‌ಸೈಟ್ ಅಂಕಿಅಂಶ ಪ್ರಕಾರ ವಿಶ್ವದಾದ್ಯಂತ ಈವರೆಗೆ 4.66 ಕೋಟಿಗೂ ಹೆಚ್ಚು ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, 12.03 ಲಕ್ಷಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. 3.36 ಕೋಟಿಗೂ ಹೆಚ್ಚು ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಜಗತ್ತಿನಾದ್ಯಂತ 1.18 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿವೆ.

ಕೊರೊನಾ ವೈರಸ್ ಸೋಂಕು ಹರಡುವಿಕೆಯ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಪೋರ್ಚುಗಲ್‌ನಲ್ಲಿ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಲು ನಿರ್ಧರಿಸಲಾಗಿದೆ.

ಪ್ರಧಾನಿ ಆಂಟೋನಿಯೊ ಕೋಸ್ಟಾ ಅವರು ಸಚಿವರ ಸಭೆ ನಡೆಸಿದ್ದು, ಆರೋಗ್ಯ ತುರ್ತು ಪರಿಸ್ಥಿತಿ ನವೆಂಬರ್ 15ರ ವರೆಗೂ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ. ತೀರಾ ಅನಿವಾರ್ಯವಲ್ಲದ ಹೊರತು ಹೊರಗಡೆ ಸಂಚರಿಸದಂತೆ ಜನತೆಗೆ ಸೂಚಿಸಲಾಗಿದೆ.

ಸೋಂಕಿನಿಂದಾಗಿ ಅತಿಹೆಚ್ಚು ಸಾವು–ನೋವಿಗೆ ತುತ್ತಾಗಿರುವ ಅಮೆರಿಕದಲ್ಲಿ ಸಾವಿನ ಸಂಖ್ಯೆ 2.36 ಲಕ್ಷದ ಗಡಿ ದಾಟಿದೆ. ಅಲ್ಲಿ ಈವರೆಗೆ 94.17 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದು, 2,36,160 ಸೋಂಕಿತರು ಮೃತಪಟ್ಟಿದ್ದಾರೆ. 60.66 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.

ಇದನ್ನೂ ಓದಿ: 

ಬ್ರಿಟನ್‌ನಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 10.34 ಲಕ್ಷ ದಾಟಿದೆ ಹಾಗೂ ಈವರೆಗೂ 46,717 ಮಂದಿ ಸಾವಿಗೀಡಾಗಿದ್ದಾರೆ. ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್ ಇಂಗ್ಲೆಂಡ್‌ನಲ್ಲಿ ಡಿಸೆಂಬರ್ 2ರವರೆಗೆ ಮತ್ತೊಮ್ಮೆ ಲಾಕ್‌ಡೌನ್ ಘೋಷಿಸುವ ಸಾಧ್ಯತೆಗಳಿವೆ ಎಂದು ಶನಿವಾರ ವರದಿಯಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು