ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: ಅಮೆರಿಕದಲ್ಲಿ ಒಂದೇ ದಿನ 2.9 ಲಕ್ಷ ಪ್ರಕರಣ ದಾಖಲು

Last Updated 9 ಜನವರಿ 2021, 4:13 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2.9 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾವೈರಸ್‌ ಸೋಂಕು ತಗುಲಿದೆ. ಇದೇ ವೇಳೆ 3,676 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಾನ್‌ ಹಾಪ್‌ಕಿನ್ಸ್‌ ವಿವಿ ತಿಳಿಸಿದೆ.

ವಿವಿಯ ಮಾಹಿತಿ ಪ್ರಕಾರ ಅತಿಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಇದುವರೆಗೆ ಒಟ್ಟು 2.18 ಕೋಟಿ ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 3.68 ಲಕ್ಷ ಮಂದಿ ಮೃತಪಟ್ಟಿದ್ದಾರೆ. ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 1.04 ಕೋಟಿ ಪ್ರಕರಣಗಳು ವರದಿಯಾಗಿವೆ. 1 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1.50 ಲಕ್ಷ ಜನರು ಮೃತಪಟ್ಟಿದ್ದಾರೆ.

ಬ್ರೆಜಿಲ್‌ನಲ್ಲಿ 80 ಲಕ್ಷ, ರಷ್ಯಾದಲ್ಲಿ 33 ಲಕ್ಷ, ಇಂಗ್ಲೆಂಡ್‌ನಲ್ಲಿ 29 ಲಕ್ಷ ಪ್ರಕರಣಗಳು ಬೆಳಕಿಗೆ ಬಂದಿವೆ.

ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 10.41 ಕೋಟಿ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 4.9 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆ ಸಾವಿನ ಪ್ರಮಾಣ 19 ಲಕ್ಷದ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT