ವಿಶ್ವಸಂಸ್ಥೆ: ಕೋವಿಡ್–19 ಲಸಿಕೆಗಳನ್ನು ಬಡ ಹಾಗೂ ಶ್ರೀಮಂತ ರಾಷ್ಟ್ರಗಳಿಗೆ ನ್ಯಾಯಯುತವಾಗಿ ವಿತರಿಸುವ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಪ್ರಯತ್ನಕ್ಕೆ ಹಣಕಾಸು ನೆರವು ನೀಡಲು 180ಕ್ಕೂ ಹೆಚ್ಚು ದೇಶಗಳು ಸಮ್ಮತಿಸಿವೆ.

ಕೊವಾಕ್ಸ್ ಹಣಕಾಸು ಸೌಲಭ್ಯಕ್ಕೆ ಸಂಬಂಧಿಸಿ ಡಬ್ಲ್ಯುಎಚ್‌ಒ ಜತೆ ಕಾರ್ಯನಿರ್ವಹಿಸುತ್ತಿರುವ ಜಿಎವಿಐ ಲಸಿಕೆ ಮೈತ್ರಿಕೂಟದ ಸದಸ್ಯರ ಸಂಖ್ಯೆ 170 ಇದ್ದುದು ಈಗ ಹೆಚ್ಚಳಗೊಂಡಿದೆ. ಇತ್ತೀಚೆಗೆ ಚೀನಾವೂ ಮೈತ್ರಿಕೂಟದಲ್ಲಿ ಭಾಗಿಯಾಗುವುದಾಗಿ ಘೋಷಿಸಿದೆ ಎಂದು ಡಬ್ಲ್ಯುಎಚ್‌ಒ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.

ಜಾನ್ಸ್ ಹಾಪ್‌ಕಿನ್ಸ್ ಕೊರೊನಾ ವೈರಸ್ ರಿಸೋರ್ಸ್ ಸೆಂಟರ್ ದತ್ತಾಂಶಗಳ ಪ್ರಕಾರ, ವಿಶ್ವದಾದ್ಯಂತ ಈವರೆಗೆ 3.7 ಕೋಟಿಗೂ ಹೆಚ್ಚು ಮಂದಿ ಕೊರೊನಾ ವೈರಸ್ ಸೋಂಕಿತರಾಗಿದ್ದಾರೆ. 10.7 ಲಕ್ಷಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 2.6 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ.

ಅಮೆರಿಕದಲ್ಲಿ 77 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್ ತಗುಲಿದ್ದು, 2.1 ಲಕ್ಷಕ್ಕೂ ಹೆಚ್ಚು ಸೋಂಕಿತರು ಅಸುನೀಗಿದ್ದಾರೆ.

ಇದನ್ನೂ ಓದಿ:Covid-19 India Update: ದೇಶದಲ್ಲಿ 71 ಲಕ್ಷ ದಾಟಿದ ಒಟ್ಟು ಪ್ರಕರಣಗಳು

ಅತಿಹೆಚ್ಚು ಸೋಂಕು ತಗುಲಿರುವ ಜನರಿರುವ ದೇಶಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ 71.2 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಮೃತರ ಸಂಖ್ಯೆ 1 ಲಕ್ಷ ದಾಟಿದೆ. ಬ್ರೆಜಿಲ್‌ನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 50 ಲಕ್ಷ ದಾಟಿದ್ದು 1,50,488 ಮಂದಿ ಈವರೆಗೆ ಸಾವಿಗೀಡಾಗಿದ್ದಾರೆ. ರಷ್ಯಾದಲ್ಲಿ ಈವರೆಗೆ 13 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದು 22,594 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಬಟ್ಟೆ ಮಾಸ್ಕ್ ಪ್ರತಿದಿನ ತೊಳೆದರೆ ಮಾತ್ರ ರಕ್ಷಣೆ: ಅಧ್ಯಯನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.