Covid-19 World Updates: ಒಂದೂವರೆ ಲಕ್ಷ ಹೊಸ ಪ್ರಕರಣ

ವಾಷಿಂಗ್ಟನ್: ಇಂದು ಪ್ರಪಂಚದಾದ್ಯಂತ ಹೊಸದಾಗಿ 1.52 ಲಕ್ಷ ಜನರಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, 2,773 ಮೃತಪಟ್ಟಿದ್ದಾರೆ ಎಂದು ವರ್ಡೋಮೀಟರ್ ವೆಬ್ಸೈಟ್ ವರದಿಮಾಡಿದೆ. ಇದರಿಂದಾಗಿ ಪ್ರಪಂಚದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ 6.32 ಕೋಟಿಗೂ ಹೆಚ್ಚಾಗಿದ್ದು, ಸಾವಿನ ಸಂಖ್ಯೆ 14,67,624ಕ್ಕೆ ತಲುಪಿದೆ.
ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಷ್ಟ್ರಗಳ ಸಾಲಿನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಷ್ಯಾದಲ್ಲಿ ಇಂದು ಇದುವರೆಗೆ 26,338 ಹೊಸ ಪ್ರಕರಣಗಳು ವರದಿಯಾಗಿವೆ. ಮಾತ್ರವಲ್ಲದೆ 368 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಈ ದೇಶದಲ್ಲಿ ಪ್ರಕರಣಗಳ ಸಂಖ್ಯೆ 22.95 ಲಕ್ಷಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 39,895 ಆಗಿದೆ.
ಇದನ್ನೂ ಓದಿ: Covid-19 India Update| 24 ಗಂಟೆಯಲ್ಲಿ 38,772 ಪ್ರಕರಣ ಪತ್ತೆ, 443 ಸಾವು
ವರ್ಡೋಮೀಟರ್ ಮಾಹಿತಿ ಪ್ರಕಾರ ಇಂದು ಅಮೆರಿಕದಲ್ಲಿ 4,431, ಭಾರತದಲ್ಲಿ 12,524 ಪ್ರಕರಣಗಳು ವರದಿಯಾಗಿವೆ.
4.3 ಕೋಟಿ ಸೋಂಕಿತರು ಗುಣಮುಖ
ಇಂದು 1.70 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ಒಟ್ಟು ಗುಣಮುಖರಾದವರ ಸಂಖ್ಯೆ 4 ಕೋಟಿ 37 ಲಕ್ಷಕ್ಕೂ ಹೆಚ್ಚಾಗಿದೆ. 94.4 ಲಕ್ಷ ಪ್ರಕರಣಗಳು ವರದಿಯಾಗಿರುವ ಭಾರತದಲ್ಲಿ, 88.6 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಅತಿಹೆಚ್ಚು (1 ಕೋಟಿ 37 ಲಕ್ಷ) ಪ್ರಕರಣಗಳು ದಾಖಲಾಗಿರುವ ಅಮೆರಿಕದಲ್ಲಿ ಈವರೆಗೆ ಒಟ್ಟು 81 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ರಷ್ಯಾದಲ್ಲಿ 55 ಲಕ್ಷ ಸೋಂಕಿತರು ಚೇತರಿಸಿಕೊಂಡಿದ್ದಾರೆ.
ಒಟ್ಟಾರೆ ಇನ್ನೂ 1.83 ಕೋಟಿ ಪ್ರಕರಣಗಳು ಸಕ್ರಿಯವಾಗಿದ್ದು, ಇದರಲ್ಲಿ 1.05 ಲಕ್ಷ ಸೋಂಕಿತರು ಸ್ಥಿತಿ ಗಂಭೀರವಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.