ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Updates: ಒಂದೇದಿನ 1.89 ಲಕ್ಷ ಸೋಂಕಿತರು ಗುಣಮುಖ

Last Updated 4 ಡಿಸೆಂಬರ್ 2020, 16:14 IST
ಅಕ್ಷರ ಗಾತ್ರ

ವಾಷಿಂಗ್ಟನ್‌:ಇಂದು ಪ್ರಪಂಚದಾದ್ಯಂತ ಕೋವಿಡ್‌–19 ನಿಂದ 1.89 ಲಕ್ಷ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4.55 ಕೋಟಿಗೆ ಏರಿಕೆಯಾಗಿದೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿಮಾಡಿದೆ.

ಶುಕ್ರವಾರ ಬರೋಬ್ಬರಿ 2.09 ಲಕ್ಷ ಹೊಸ ಪ್ರಕರಣಗಳು ವರದಿಯಾಗಿದ್ದು, 4,370 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು ಸೋಂಕಿತರ ಸಂಖ್ಯೆ 6.57 ಕೋಟಿಗೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 15.15 ಲಕ್ಷಕ್ಕೆ ತಲುಪಿದೆ.

ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಷ್ಟ್ರಗಳ ಸಾಲಿನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಷ್ಯಾದಲ್ಲಿ ಇಂದು 27,403 ಹೊಸ ಪ್ರಕರಣಗಳು ವರದಿಯಾಗಿವೆ. ಮಾತ್ರವಲ್ಲದೆ 569 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಈ ದೇಶದಲ್ಲಿ ಪ್ರಕರಣಗಳ ಸಂಖ್ಯೆ 24.02 ಲಕ್ಷಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 42,176 ಆಗಿದೆ. 18.88 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ.

ವರ್ಡೋಮೀಟರ್ ಮಾಹಿತಿ ಪ್ರಕಾರ ಇಂದು ಅಮೆರಿಕದಲ್ಲಿ 10,688, ಭಾರತದಲ್ಲಿ 18,306 ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ 90 ಲಕ್ಷ ಸೋಂಕಿತರು ಗುಣಮುಖ
95.93 ಲಕ್ಷ ಪ್ರಕರಣಗಳು ವರದಿಯಾಗಿರುವ ಭಾರತದಲ್ಲಿ, ಈವರೆಗೆ 90.42 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 1.39 ಲಕ್ಷ ಮಂದಿ ಮೃತಪಟ್ಟಿದ್ದು, ಇನ್ನೂ 4.12 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ. ಅತಿಹೆಚ್ಚು (1 ಕೋಟಿ 45 ಲಕ್ಷ) ಪ್ರಕರಣಗಳು ದಾಖಲಾಗಿರುವ ಅಮೆರಿಕದಲ್ಲಿ ಈವರೆಗೆ ಒಟ್ಟು 85.68 ಲಕ್ಷ ಮಂದಿ ಗುಣಮುಖರಾಗಿದ್ದಾರೆ.

ಒಟ್ಟಾರೆ ಪ್ರಪಂಚದಾದ್ಯಂತ ಇನ್ನೂ 1.86 ಕೋಟಿ ಪ್ರಕರಣಗಳು ಸಕ್ರಿಯವಾಗಿದ್ದು, ಇದರಲ್ಲಿ 1.06 ಲಕ್ಷ ಸೋಂಕಿತರು ಗಂಭೀರ ಸ್ಥಿತಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT