ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: 4.62 ಕೋಟಿ ಸೋಂಕಿತರು ಗುಣಮುಖ

Last Updated 6 ಡಿಸೆಂಬರ್ 2020, 6:38 IST
ಅಕ್ಷರ ಗಾತ್ರ

ವಾಷಿಂಗ್ಟನ್: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 6.68 ಕೋಟಿ ಕೋವಿಡ್–19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ 4.62 ಕೋಟಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ವರ್ಡೋಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ಅತಿ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಈವರೆಗೆ 1.49 ಕೋಟಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 87.87 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 2.87 ಲಕ್ಷ ಮಂದಿ ಮೃತಪಟ್ಟಿದ್ದು, ಇನ್ನೂ 59 ಲಕ್ಷ ಪ್ರಕರಣಗಳು ಸಕ್ರಿಯವಾಗಿವೆ. ಇದರಲ್ಲಿ 26,261 ಜನರ ಸ್ಥಿತಿ ಗಂಭೀರವಾಗಿದೆ.

ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 96.44 ಲಕ್ಷ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 1.40 ಲಕ್ಷ ಸೋಂಕಿತರು ಮೃತಪಟ್ಟು, 91 ಲಕ್ಷ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 4 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯವಾಗಿವೆ.

ಬ್ರೆಜಿಲ್‌ನಲ್ಲಿ 65 ಲಕ್ಷ, ರಷ್ಯಾದಲ್ಲಿ 24 ಲಕ್ಷ, ಫ್ರಾನ್ಸ್‌ನಲ್ಲಿ 22 ಲಕ್ಷ ಪ್ರಕರಣಗಳು ದಾಖಲಾಗಿವೆ.

ಸಾವಿನ ಸಂಖ್ಯೆ 15 ಲಕ್ಷಕ್ಕೆ ಏರಿಕೆ
ಕೋವಿಡ್‌ನಿಂದಾಗಿ ಪ್ರಪಂಚದಾದ್ಯಂತ ಮೃತಪಟ್ಟವರ ಸಂಖ್ಯೆ 15.34 ಲಕ್ಷಕ್ಕೆ ಏರಿಕೆಯಾಗಿವೆ. ಉಳಿದಂತೆ 1.90 ಕೋಟಿ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 1.05 ಲಕ್ಷ ಸೋಂಕಿತರ ಸ್ಥಿತಿ ಗಂಭೀರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT