ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Updates: ವಿಶ್ವದಾದ್ಯಂತ 1.71 ಕೋಟಿ ಸಕ್ರಿಯ ಪ್ರಕರಣ

Last Updated 25 ನವೆಂಬರ್ 2020, 17:35 IST
ಅಕ್ಷರ ಗಾತ್ರ

ವಾಷಿಂಗ್ಟನ್: ಕೊರೊನಾ ವೈರಸ್‌ ಸಾಂಕ್ರಾಮಿಕದಿಂದ ವಿಶ್ವದಲ್ಲೇ ಅತಿಹೆಚ್ಚು ತೊಂದರೆಗೊಳಗಾಗಿರುವ ಅಮೆರಿಕದಲ್ಲಿ ಒಂದೇ ದಿನ 19,701 ಮಂದಿ ಸೋಂಕಿತರಾಗಿದ್ದಾರೆ. 378 ಸೋಂಕಿತರು ಅಸುನೀಗಿದ್ದಾರೆ.

ಇದರೊಂದಿಗೆ ಅಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 1.29 ಕೋಟಿ ಆಗಿದ್ದು, ಒಟ್ಟು 2.66 ಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 76.41 ಲಕ್ಷದಷ್ಟು ಸೋಂಕಿತರು ಗುಣಮುಖರಾಗಿದ್ದಾರೆ. 50 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ವರ್ಲ್ಡೊ ಮೀಟರ್ ವೆಬ್‌ಸೈಟ್ ದತ್ತಾಂಶ ಪ್ರಕಾರ ವಿಶ್ವದಾದ್ಯಂತ ಈವರೆಗೆ 6 ಕೋಟಿಗೂ ಹೆಚ್ಚು ಮಂದಿ ಸೋಂಕಿತರಾಗಿದ್ದಾರೆ. 14.19 ಲಕ್ಷಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದು, 4.17 ಕೋಟಿಗೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 1.71 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ಕೋವಿಡ್‌ನಿಂದ ಸಾವಿಗೀಡಾದವರ ಪಟ್ಟಿಯಲ್ಲಿ ಬ್ರೆಜಿಲ್ ಎರಡನೇ ಸ್ಥಾನದಲ್ಲಿದ್ದು, ಒಟ್ಟಾರೆ ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅತಿಹೆಚ್ಚು ಮಂದಿಗೆ ಸೋಂಕು ತಗುಲಿರುವ ದೇಶಗಳ ಯಾದಿಯಲ್ಲಿ ಭಾರತವು ಎರಡನೇ ಸ್ಥಾನದಲ್ಲಿದೆ.

ಸದ್ಯ ಭಾರತದಲ್ಲಿ 4.48 ಲಕ್ಷ, ಬ್ರೆಜಿಲ್‌ನಲ್ಲಿ 4.75 ಲಕ್ಷ, ರಷ್ಯಾದಲ್ಲಿ 4.64 ಲಕ್ಷ, ಫ್ರಾನ್ಸ್‌ನಲ್ಲಿ 19.48 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ಏಷ್ಯಾದಲ್ಲಿ ಅತಿ ಹೆಚ್ಚು ಕೋವಿಡ್‌–19 ಪ್ರಕರಣಗಳ ಪೈಕಿ ಭಾರತದ ನಂತರದ ಸ್ಥಾನದಲ್ಲಿ ಇಂಡೋನೇಷ್ಯಾ ಇದೆ. ಅಲ್ಲಿ ಈವರೆಗೆ 5,11,836 ಮಂದಿ ಸೋಂಕಿತರಾಗಿದ್ದು, 16,225 ಸಾವು ಸಂಭವಿಸಿದೆ. 4,29,807 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 65,804 ಸಕ್ರಿಯ ಪ್ರಕರಣಗಳಿವೆ.

ಪಾಕಿಸ್ತಾನದಲ್ಲಿ ಒಂದೇ ದಿನ 3,009 ಹೊಸ ಪ್ರಕರಣಗಳು ದೃಢಪಟ್ಟಿದ್ದು, 59 ಸೋಂಕಿತರು ಸಾವಿಗೀಡಾಗಿದ್ದಾರೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3.82 ಲಕ್ಷ ದಾಟಿದ್ದು, 7,803 ಮಂದಿ ಈವರೆಗೆ ಇಹಲೋಕ ತ್ಯಜಿಸಿದ್ದಾರೆ. 3.32 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT