ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದಲ್ಲಿಯೂ ಕೊರೊನಾ ಸೋಂಕು ಹೆಚ್ಚಳ: ಇದು ವೈರಸ್‌ನ ಹೊಸ ಪ್ರಬೇಧವೇ?

Last Updated 21 ಡಿಸೆಂಬರ್ 2020, 13:09 IST
ಅಕ್ಷರ ಗಾತ್ರ

ಮಾಸ್ಕೋ: ದಕ್ಷಿಣ ಆಫ್ರಿಕಾ ಹಾಗೂ ಬ್ರಿಟನ್‌ ನಂತರ ರಷ್ಯಾದಲ್ಲಿಯೂ ಕೊರೊನಾ ವೈರಸ್‌ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವುದು ಕಂಡುಬಂದಿದೆ.

ಕಳೆದ 24 ಗಂಟೆಗಳಲ್ಲಿ ರಷ್ಯಾದಾದ್ಯಂತ 29,350 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 493 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ವರೆಗೆ ಒಟ್ಟು 28,77,727 ಕೋವಿಡ್‌ ಪ್ರಕರಣಗಳು ರಷ್ಯಾದಲ್ಲಿ ದಾಖಲಾಗಿದ್ದು, 51, 351 ಸೋಂಕಿತರು ಸಾವಿಗೀಡಾಗಿದ್ದಾರೆ. ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳಲ್ಲಿ ರಷ್ಯಾ ನಾಲ್ಕನೇ ಸ್ಥಾನದಲ್ಲಿದೆ.

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ 7,797 ಹೊಸ ಪ್ರಕರಣಗಳು ದಾಖಲಾಗಿವೆ. ಎರಡನೇ ದೊಡ್ಡ ನಗರವಾದ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ಒಂದೇ ದಿನಕ್ಕೆ 3,752 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಈಗಾಗಲೇ ದಕ್ಷಿಣ ಆಫ್ರಿಕಾ ಹಾಗೂ ಬ್ರಿಟನ್‌ನಲ್ಲಿ ಕೊರೊನಾ ವೈರಸ್‌ನ ಹೊಸ ಪ್ರಬೇಧ ಪತ್ತೆಯಾಗಿದ್ದು, ಸೋಂಕು ಹರಡುವಿಕೆಯ ಎರಡನೇ ಅಲೆಗೆ ಕಾರಣವಾಗಿದೆ ಎಂದು ಅಲ್ಲಿನ ಸರ್ಕಾರಗಳು ಹೇಳಿವೆ.

ಇದೀಗ ರಷ್ಯಾದಲ್ಲಿ ಕೊರೊನಾ ಸೋಂಕು ಪ್ರಕರಣಗಳಲ್ಲಿ ಹಠಾತ್ತಾಗಿ ಏರಿಕೆ ಕಂಡುಬಂದಿರುವುದು ಹಲವು ಸಂಶಯಗಳನ್ನು ಹುಟ್ಟುಹಾಕಿದೆ. ಇದು ಕೊರೊನಾ ವೈರಸ್‌ನ ಹೊಸ ಪ್ರಬೇಧ ಇರಬಹುದಾ ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಸರ್ಕಾರದ ಅಂಕಿ-ಅಂಶಗಳಿಗಿಂತ ಅಧಿಕ ಕೊರೊನಾ ಸೋಂಕು ಪ್ರಕರಣಗಳು ರಷ್ಯಾದಲ್ಲಿ ಇರಬಹುದು ಎಂದು ಕೆಲ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವಿಚಾರವೀಗ ಅಲ್ಲಿನ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT