ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: ಜಗತ್ತಿನಾದ್ಯಂತ 3.48 ಕೋಟಿಗೂ ಹೆಚ್ಚು ಮಂದಿ ಗುಣಮುಖ

Last Updated 5 ನವೆಂಬರ್ 2020, 16:25 IST
ಅಕ್ಷರ ಗಾತ್ರ
ADVERTISEMENT
""

ವಾಷಿಂಗ್ಟನ್: ಜಗತ್ತಿನಾದ್ಯಂತ 4.86 ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 12.33 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರ್ಡೊಮೀಟರ್‌ ವೆಬ್‌ಸೈಟ್‌ನ ಅಂಕಿಅಂಶಗಳಿಂದ ತಿಳಿದು ಬಂದಿದೆ.

ಈವರೆಗೆ ಜಗತ್ತಿನಾದ್ಯಂತ 3,48,35,648 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1,25,79,608 ಸಕ್ರಿಯ ಕೋವಿಡ್‌–19 ಪ್ರಕರಣಗಳಿವೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ 98,10,930 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಸದ್ಯ 2,39,943 ಮಂದಿ ಸಾವಿಗೀಡಾಗಿದ್ದಾರೆ. 62,94,444 ಜನರು ಈವರೆಗೆ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ 83,91,581, ಬ್ರೆಜಿಲ್‌ನಲ್ಲಿ 55,90,941, ರಷ್ಯಾದಲ್ಲಿ 17,12,858 ಹಾಗೂ ಫ್ರಾನ್ಸ್‌ನಲ್ಲಿ 15,43,321 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT