ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid World Update: ಭಾರತ, ಬ್ರೆಜಿಲ್‌ ಸೇರಿ ಹಲವು ದೇಶಗಳಲ್ಲಿ ಪ್ರಕರಣ‌ ಹೆಚ್ಚಳ

Last Updated 19 ಮಾರ್ಚ್ 2021, 16:45 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಪ್ರಪಂಚದಾದ್ಯಂತ ಇದುವರೆಗೆ ಒಟ್ಟು 12.26 ಕೋಟಿ ಜನರಿಗೆ ಕೋವಿಡ್‌–19 ಸೋಂಕು ತಗುಲಿದೆ. ಇದರಲ್ಲಿ 9.88 ಕೋಟಿ ಸೋಂಕಿತರು ಗುಣಮುಖರಾಗಿದ್ದು, 27.06 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವರ್ಲ್ಡೊ ಮೀಟರ್ ವೆಬ್‌ಸೈಟ್‌ ವರದಿ ಮಾಡಿದೆ.

ವಿಶ್ವದಾದ್ಯಂತ ಇಂದು ಹೊಸದಾಗಿ 2,38,749 ಪ್ರಕರಣಗಳು ಬೆಳಕಿಗೆ ಬಂದಿದ್ದು, 3,975 ಜನರು ಮೃತಪಟ್ಟಿದ್ದಾರೆ. ಇದೇ ವೇಳೆ 9,88,25,584 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 2.1 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 89,291 ಜನರ ಸ್ಥಿತಿ ಗಂಭೀರವಾಗಿದೆ.

ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಇಂದು 6,765 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 94 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದೇಶದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,52,564ಕ್ಕೆ ಏರಿಕೆಯಾಗಿದೆ. ಅಮೆರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 1,15,51,980 ಲಕ್ಷ ಪ್ರಕರಣಗಳು ವರದಿಯಾಗಿವೆ.

ಉಳಿದಂತೆ ಸೋಂಕು ಪ್ರಕರಣಗಳ ಸಂಖ್ಯೆ ಬ್ರೆಜಿಲ್‌ನಲ್ಲಿ 1,17,87,600, ಫ್ರಾನ್ಸ್‌ನಲ್ಲಿ 41,81,607, ರಷ್ಯಾದಲ್ಲಿ 44,37,938 ಲಕ್ಷ, ಸ್ಪೇನ್‌ನಲ್ಲಿ 32,12,332 ಲಕ್ಷಕ್ಕೆ ಏರಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT