ಶನಿವಾರ, ಮೇ 28, 2022
22 °C

ವಿಮಾನ ಪ್ರಯಾಣಿಕರಿಗೆ ಮಾಸ್ಕ್‌ ಕಡ್ಡಾಯವಲ್ಲ: ಐರೋಪ್ಯ ಒಕ್ಕೂಟ

ಎಪಿ Updated:

ಅಕ್ಷರ ಗಾತ್ರ : | |

Prajavani

ಬರ್ಲಿನ್‌: ಕೋವಿಡ್‌ ನಿರ್ಬಂಧಗಳನ್ನು ಮತ್ತಷ್ಟೂ ಸಡಿಲಗೊಳಿಸುವ ನಿಟ್ಟಿನಲ್ಲಿ, ಯುರೋಪ್‌ನ ವಿಮಾನ ನಿಲ್ದಾಣಗಳು ಹಾಗೂ ವಿಮಾನಗಳಲ್ಲಿ ಪ್ರಯಾಣಿಕರು ಮಾಸ್ಕ್‌ ಧರಿಸುವ ಅಗತ್ಯವಿಲ್ಲ ಎಂದು ಐರೋಪ್ಯ ಒಕ್ಕೂಟದ ಅಧಿಕಾರಿಗಳು ತಿಳಿಸಿದ್ದಾರೆ.

‘ಯುರೋಪ್‌ನ ರೋಗ ನಿಯಂತ್ರಣ ಕೇಂದ್ರದೊಂದಿಗೆ ಚರ್ಚಿಸಿದ ನಂತರ ಮಾಸ್ಕ್‌ ಧರಿಸುವುದನ್ನು ರದ್ದುಗೊಳಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದು ವಿಮಾನ ಪ್ರಯಾಣವನ್ನು ಸಹಜಸ್ಥಿತಿಗೆ ತರುವ ನಿಟ್ಟಿನಲ್ಲಿ ಇಟ್ಟ ಪ್ರಮುಖ ಹೆಜ್ಜೆಯಾಗಿದೆ’ ಎಂದು ಐರೋಪ್ಯ ಒಕ್ಕೂಟ ವಿಮಾನಯಾನ ಭದ್ರತಾ ಸಂಸ್ಥೆ (ಇಎಎಸ್‌ಎ) ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು