ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ತುರ್ತು ಬಳಕೆ ಶಿಫಾರಸು ಪ್ರಕ್ರಿಯೆಗೆ ಹೆಚ್ಚು ಸಮಯ: ಡಬ್ಲ್ಯುಎಚ್‌ಒ

Last Updated 22 ಅಕ್ಟೋಬರ್ 2021, 6:23 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ಯಾವುದೇ ಕೋವಿಡ್‌ ಲಸಿಕೆಯನ್ನು ತುರ್ತು ಬಳಕೆಗೆ ಶಿಫಾರಸು ಮಾಡುವ ಮುನ್ನ, ಸಂಪೂರ್ಣ ಮೌಲ್ಯಮಾಪನ ಮಾಡಬೇಕಿರುವ ಕಾರಣ, ‘ಶಿಫಾರಸು ಪ್ರಕ್ರಿಯೆ‘ಗೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತದಲ್ಲಿ ತಯಾರಾಗುತ್ತಿರುವ ‘ಕೋವಾಕ್ಸಿನ್‌‘ ಲಸಿಕೆಯನ್ನು ತುರ್ತು ಬಳಕೆಗೆ ಶಿಫಾರಸು ಮಾಡುವ ಪ್ರಕ್ರಿಯೆ ವಿಳಂಬವಾಗುತ್ತಿರುವ ಕುರಿತ ಪ್ರಶ್ನೆಗೆ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ)ಆರೋಗ್ಯ ತುರ್ತು ಕಾರ್ಯಕ್ರಮ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಮೈಕ್ ರ‍್ಯಾನ್‌ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

‘ಲಸಿಕೆಯನ್ನು ಸಂಪೂರ್ಣವಾಗಿ ಮೌಲ್ಯಮಾಪನ ಮಾಡಬೇಕಾಗಿರುವುದರಿಂದ ಶಿಫಾರಸು ಪ್ರಕ್ರಿಯೆಗೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಈ ಲಸಿಕೆಯನ್ನು ವಿಶ್ವದಾದ್ಯಂತ ಪೂರೈಸುವುದರಿಂದ, ಸುಧೀರ್ಘವಾಗಿ ಮೌಲ್ಯಮಾಪನ ಮಾಡುವ ಅಗತ್ಯವಿದ್ದು, ಇದಕ್ಕೆ ಒಂದೆರಡು ವಾರಗಳ ಸಮಯವಾದರೂ ಬೇಕಾಗುತ್ತದೆ‘ ಎಂದು ಅವರು ಹೇಳಿದ್ದಾರೆ. ಮುಖ್ಯವಾದ ವಿಷಯವೇನೆಂದರೆ, ಡಬ್ಲ್ಯುಎಚ್‌ಒ ಜಾಗತಿಕಮಟ್ಟಕ್ಕೆ ಅನ್ವಯಿಸುವಂತೆ ಇಂಥ ಶಿಫಾರಸುಗಳನ್ನು ಮಾಡುತ್ತದೆ‘ ಎಂದು ಮೈಕ್‌ ರ‍್ಯಾನ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT