ಸೋಮವಾರ, ಅಕ್ಟೋಬರ್ 18, 2021
23 °C

ವಿಶ್ವಸಂಸ್ಥೆಗೆ ಚೀನಾ 3 ಲಕ್ಷ ಡೋಸ್‌ ಕೋವಿಡ್‌ ಲಸಿಕೆ ದೇಣಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ‘ಈ ವರ್ಷದ ಆರಂಭದಲ್ಲಿ ಭಾರತ ಸರ್ಕಾರ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ದೇಣಿಗೆಯಾಗಿ ನೀಡಿದ್ದ ಕೋವಿಡ್‌–19ರ ಲಸಿಕೆಗಳು ಖಾಲಿಯಾಗಿದ್ದು, ಇದೇ ವೇಳೆಗೆ ಚೀನಾ ಸರ್ಕಾರ 3 ಲಕ್ಷ ಡೋಸ್‌ಗಳಷ್ಟು ಲಸಿಕೆಯನ್ನು ದೇಣಿಗೆಯಾಗಿ ನೀಡಿದೆ‘ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ಅವರ ವಕ್ತಾರರು ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನ ಕಾರ್ಯದರ್ಶಿಯವರ ವಕ್ತಾರ ಸ್ಟೀಫನ್ ಡುಜಾರಿಕ್‌, ‘ಈ ವರ್ಷದ ಮಾರ್ಚ್‌ನಲ್ಲಿ ಭಾರತ ಸರ್ಕಾರ 2 ಲಕ್ಷ ಡೋಸ್‌ಗಳಷ್ಟು ಕೋವಿಡ್‌ ಲಸಿಕೆಗಳನ್ನು ಉಡುಗೊರೆಯಾಗಿ ನೀಡಿತ್ತು. ಅದು ಖಾಲಿಯಾದ ವೇಳೆಗೆ ಸರಿಯಾಗಿ, ಚೀನಾ ಸರ್ಕಾರ 3 ಲಕ್ಷ ಡೋಸ್‌ಗಳಷ್ಟು ಲಸಿಕೆಗಳು ದೇಣಿಗೆಯಾಗಿ ನೀಡಿತು‘ ಎಂದು ತಿಳಿಸಿದರು.

ಓದಿ: 

ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ಅತಿಹೆಚ್ಚು ಸೈನಿಕರನ್ನು ಕೊಡುಗೆಯಾಗಿ ನೀಡಿರುವ ರಾಷ್ಟ್ರಗಳಲ್ಲಿ ಭಾರತವೂ ಒಂದು.

ಫೆಬ್ರುವರಿ ತಿಂಗಳಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯೊಂದರಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ‘ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ ಭಾರತ ಸರ್ಕಾರ 2 ಲಕ್ಷ ಡೋಸ್‌ಗಳಷ್ಟು ಕೋವಿಡ್‌ ಲಸಿಕೆಗಳನ್ನು ಉಡುಗೊರೆಯಾಗಿ ನೀಡುವುದಾಗಿ‘ ಘೋಷಿಸಿದ್ದರು.

ನಂತರ ಮಾರ್ಚ್ ತಿಂಗಳಲ್ಲಿ ಇಷ್ಟು ಪ್ರಮಾಣದ ಲಸಿಕೆಗಳು ವಿಶ್ವಸಂಸ್ಥೆಗೆ ಭಾರತದಿಂದ ರವಾನೆಯಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು