ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಕಳೆದ ವಾರ ಜಾಗತಿಕವಾಗಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಶೇ 21ರಷ್ಟು ಹೆಚ್ಚಳ

ಎಪಿ Updated:

ಅಕ್ಷರ ಗಾತ್ರ : | |

ಜಿನೀವಾ: ಕಳೆದ ವಾರ ಜಾಗತಿಕವಾಗಿ ಕೋವಿಡ್ ಪಿಡುಗಿನಿಂದ ಮೃತಪಟ್ಟವರ ಸಂಖ್ಯೆ ಶೇ 21ರಷ್ಟು ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.

ಒಟ್ಟು 69 ಸಾವಿರ ಮಂದಿ ಈ ಅವಧಿಯಲ್ಲಿ ಮೃತಪಟ್ಟಿದ್ದು, ಹೆಚ್ಚಿನ ಸಾವುಗಳು ಅಮೆರಿಕ ಮತ್ತು ದಕ್ಷಿಣ ಏಷ್ಯಾದಲ್ಲಿ  ಸಂಭವಿಸಿವೆ. ವಿಶ್ವದಾದ್ಯಂತ ಕೋವಿಡ್‌ ಪ್ರಕರಣಗಳ ಪ್ರಮಾಣ ಶೇ 8ರಷ್ಟು ಏರಿಕೆಯಾಗಿದೆ. ಇಲ್ಲಿಯವರೆಗೆ ಒಟ್ಟು 19.40 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಡಬ್ಲ್ಯುಎಚ್‌ಒ ತಿಳಿಸಿದೆ.

ಇದೇ ರೀತಿ ಪರಿಸ್ಥಿತಿ ಮುಂದುವರಿದರೆ ಮುಂದಿನ ಎರಡು ವಾರಗಳಲ್ಲಿ ಜಾಗತಿಕವಾಗಿ ಸೋಂಕಿತರ ಸಂಖ್ಯೆ 20 ಕೋಟಿಗೆ ತಲುಪಲಿದೆ ಎಂದು ಅದು ಅಂದಾಜಿಸಿದೆ. ಯೂರೋಪ್‌ ಹೊರತುಪಡಿಸಿ ಇತರೆಡೆ ಕೋವಿಡ್‌ ಸಾವಿನ ಸಂಖ್ಯೆ ಹೆಚ್ಚಾಗಿದೆ. ಅಮೆರಿಕ, ಬ್ರೆಜಿಲ್‌, ಇಂಡೋನೇಷ್ಯಾ, ಬ್ರಿಟನ್‌ ಮ್ತು ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು