ವಾಷಿಂಗ್ಟನ್: ಜಗತ್ತಿನಾದ್ಯಂತ ಕೋವಿಡ್–19 ಪ್ರಕರಣಗಳ ಸಂಖ್ಯೆ 6.45 ಕೋಟಿಗೂ ಹೆಚ್ಚಾಗಿದ್ದು, ಸಾವಿನ ಸಂಖ್ಯೆ 14.93 ಲಕ್ಷ ದಾಟಿದಿರುವುದು ವರ್ಡೋಮೀಟರ್ ವೆಬ್ಸೈಟ್ನಿಂದ ತಿಳಿದು ಬಂದಿದೆ.

ಜಗತ್ತಿನಾದ್ಯಂತ ಈವರೆಗೆ 4.47 ಕೋಟಿ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 1.82 ಕೋಟಿಗೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 1,06,103 ಜನರ ಸ್ಥಿತಿ ಗಂಭೀರವಾಗಿದೆ.

ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಷ್ಟ್ರಗಳ ಸಾಲಿನಲ್ಲಿ ಮೊದಲನೇ ಸ್ಥಾನದಲ್ಲಿರುವ ಅಮೆರಿಕದಲ್ಲಿ ಈವರೆಗೆ 1.41 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, 2.77 ಲಕ್ಷಕ್ಕೂ ಅಧಿಕ ಜನರು ಸಾವಿಗೀಡಾಗಿದ್ದಾರೆ. ಸದ್ಯ 55 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 83.46 ಲಕ್ಷಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ.

ರಷ್ಯಾದಲ್ಲಿ ಪ್ರಕರಣಗಳ ಸಂಖ್ಯೆ 23.47 ಲಕ್ಷಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 41,053ಕ್ಕೆ ಏರಿಕೆಯಾಗಿದೆ. ಬ್ರೆಜಿಲ್ನಲ್ಲಿ ಒಟ್ಟಾರೆ 63.96 ಲಕ್ಷ ಪ್ರಕರಣಗಳು, ಫ್ರಾನ್ಸ್ನಲ್ಲಿ 22.30 ಲಕ್ಷ ಪ್ರಕರಣಗಳು, ಸ್ಪೇನ್ನಲ್ಲಿ 16.73 ಜನರಿಗೆ ಸೋಂಕು ತಗುಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.