ಭಾನುವಾರ, ನವೆಂಬರ್ 29, 2020
25 °C

Covid-19 World Update: ವಿಶ್ವದಾದ್ಯಂತ 1 ಕೋಟಿಗೂ ಅಧಿಕ ಸಕ್ರಿಯ ಪ್ರಕರಣ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ವಿಶ್ವದಾದ್ಯಂತ ಗುರುವಾರದ ವೇಳೆಗೆ 1,08,45,578 ಕೋವಿಡ್‌ ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ವರ್ಲ್ಡೋಮೀಟರ್ ಕೋವಿಡ್‌ ಟ್ರ್ಯಾಕರ್‌ ವೆಬ್‌ಸೈಟ್‌ ಪ್ರಕಾರ, ಜಗತ್ತಿನಲ್ಲಿ ಈವರೆಗೆ 4,47,48,380 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದುವರೆಗೆ 11,79,035 ಮಂದಿ ಸಾವಿಗೀಡಾಗಿದ್ದಾರೆ.

ವಿಶ್ವದಲ್ಲೇ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಅಲ್ಲಿ ಒಟ್ಟು 88.38 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದರೆ, 2.30 ಲಕ್ಷಕ್ಕೂ ಹೆಚ್ಚು ಜನ ಈವರೆಗೆ ಮೃತಪಟ್ಟಿದ್ದಾರೆ. ಸದ್ಯ 29.54 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ... ಆಳ–ಅಗಲ: ಸನಿಹದಲ್ಲೇ ಇದೆಯೇ ಕೋವಿಡ್‌ ಲಸಿಕೆ?

ಭಾರತದಲ್ಲಿ 80,38,765 ಮಂದಿಗೆ ಸೋಂಕು ದೃಢಪಟ್ಟಿದ್ದು, ಈವರೆಗೆ 1,20,563 ಮಂದಿ ಸಾವಿಗೀಡಾಗಿದ್ದಾರೆ.

ಬ್ರೆಜಿಲ್‌ನಲ್ಲಿ 54,69,755 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,58,468 ಮಂದಿ ಮೃತಪಟ್ಟಿದ್ದಾರೆ. ಸದ್ಯ 3,76,739 ಸಕ್ರಿಯ ಪ್ರಕರಣಗಳು ಇವೆ.

ಮೆಕ್ಸಿಕೊದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,595 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 9,06,863ಕ್ಕೆ ಏರಿಕೆಯಾಗಿದೆ. ಇದುವರೆಗೆ 90,309 ಮಂದಿ ಕೊನೆಯುಸಿರೆಳೆದಿದ್ದಾರೆ.

ರಷ್ಯಾದಲ್ಲಿ 3,65,740, ಫ್ರಾನ್ಸ್‌ನಲ್ಲಿ 10,85,370, ಇಟಲಿಯಲ್ಲಿ 2,76,457 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು