ಶುಕ್ರವಾರ, ನವೆಂಬರ್ 27, 2020
18 °C

Covid-19 World Update: ವಿಶ್ವದಾದ್ಯಂತ 4 ಕೋಟಿಗೂ ಅಧಿಕ ಸೋಂಕಿತರು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ವಿಶ್ವದಾದ್ಯಂತ ಶುಕ್ರವಾರದ ವೇಳೆಗೆ ಕೋವಿಡ್‌ ಸೋಂಕಿತರ ಸಂಖ್ಯೆ 4 ಕೋಟಿ ದಾಟಿದೆ.

ವರ್ಲ್ಡೋಮೀಟರ್ ಕೋವಿಡ್‌ ಟ್ರ್ಯಾಕರ್‌ ವೆಬ್‌ಸೈಟ್‌ ಪ್ರಕಾರ, ಜಗತ್ತಿನಲ್ಲಿ ಈವರೆಗೆ 4,53,20,581 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇದುವರೆಗೆ 11,86,223 ಮಂದಿ ಸಾವಿಗೀಡಾಗಿದ್ದು, 3,29,93,196 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ವಿಶ್ವದಲ್ಲೇ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಅಲ್ಲಿ ಒಟ್ಟು 92.12 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದರೆ, 2.34 ಲಕ್ಷಕ್ಕೂ ಹೆಚ್ಚು ಜನ ಈವರೆಗೆ ಮೃತಪಟ್ಟಿದ್ದಾರೆ. ಸದ್ಯ 29.95 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ... ಕೋವಿಡ್‌: ಮತ್ತೆ ಏರಿಕೆ ಕಳವಳ, 49,881 ಹೊಸ ಪ್ರಕರಣಗಳು ದೃಢ

ಭಾರತದಲ್ಲಿ 80,88,046 ಮಂದಿಗೆ ಸೋಂಕು ದೃಢಪಟ್ಟಿದ್ದು, ಈವರೆಗೆ 1,21,131 ಮಂದಿ ಸಾವಿಗೀಡಾಗಿದ್ದಾರೆ. ಬ್ರೆಜಿಲ್‌ನಲ್ಲಿ 54,96,402 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,59,033 ಮಂದಿ ಮೃತಪಟ್ಟಿದ್ದಾರೆ. ಸದ್ಯ 3,83,210 ಸಕ್ರಿಯ ಪ್ರಕರಣಗಳು ಇವೆ.

ಫ್ರಾನ್ಸ್‌ನಲ್ಲಿ 12,82,769 ಪ್ರಕರಣಗಳು ವರದಿಯಾಗಿದ್ದು, ಇದುವರೆಗೆ 36,020 ಮಂದಿ ಸಾವಿಗೀಡಾಗಿದ್ದಾರೆ. ರಷ್ಯಾದಲ್ಲಿ 3,68,351, ಮೆಕ್ಸಿಕೊದಲ್ಲಿ 1,53,371, ಇಟಲಿಯಲ್ಲಿ 2,99,191, ಜರ್ಮನಿಯಲ್ಲಿ 1,48,718 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ... ಕೋವಿಡ್‌: ನಿರ್ವಹಣೆ: ಕರ್ನಾಟಕದ ಲೋಪ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು