ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 World Update: ಮೆಕ್ಸಿಕೊದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳ

Last Updated 31 ಅಕ್ಟೋಬರ್ 2020, 4:03 IST
ಅಕ್ಷರ ಗಾತ್ರ

ವಾಷಿಂಗ್ಟನ್: ಮೆಕ್ಸಿಕೊದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,000 ಅಧಿಕ ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.

ವಿಶ್ವದಾದ್ಯಂತ ಶನಿವಾರದ ವೇಳೆಗೆ 4,58,99,858 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ವರ್ಲ್ಡೋಮೀಟರ್ ಕೋವಿಡ್‌ ಟ್ರ್ಯಾಕರ್‌ ವೆಬ್‌ಸೈಟ್‌ ಪ್ರಕಾರ, ಜಗತ್ತಿನಲ್ಲಿ ಈವರೆಗೆ 3,32,49,483 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ 11,93,755 ಮಂದಿ ಸಾವಿಗೀಡಾಗಿದ್ದಾರೆ.

ವಿಶ್ವದಲ್ಲೇ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಅಲ್ಲಿ ಒಟ್ಟು 93.16 ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದರೆ, 2.35 ಲಕ್ಷಕ್ಕೂ ಹೆಚ್ಚು ಜನ ಈವರೆಗೆ ಮೃತಪಟ್ಟಿದ್ದಾರೆ. ಸದ್ಯ 30.56 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

ಭಾರತದಲ್ಲಿ 81,36,166 ಮಂದಿಗೆ ಸೋಂಕು ದೃಢಪಟ್ಟಿದ್ದು, ಈವರೆಗೆ 1,21,681 ಮಂದಿ ಸಾವಿಗೀಡಾಗಿದ್ದಾರೆ. ಬ್ರೆಜಿಲ್‌ನಲ್ಲಿ 55,19,528 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,59,562 ಮಂದಿ ಮೃತಪಟ್ಟಿದ್ದಾರೆ. ಸದ್ಯ 3,93,702 ಸಕ್ರಿಯ ಪ್ರಕರಣಗಳು ಇವೆ.

ಮೆಕ್ಸಿಕೊದಲ್ಲಿ 9,18,811 ಪ್ರಕರಣಗಳು ದಾಖಲಾಗಿದ್ದು, 91,289 ಮಂದಿ ಮೃತಪಟ್ಟಿದ್ದಾರೆ. ರಷ್ಯಾದಲ್ಲಿ 3,71,760 ಫ್ರಾನ್ಸ್‌ನಲ್ಲಿ 11,78,886 ಇಟಲಿಯಲ್ಲಿ 3,25,786 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ಪಾಕಿಸ್ತಾನದಲ್ಲಿ 3,32,993 ಮಂದಿಗೆ ಸೋಂಕು ತಗುಲಿದ್ದು, ಆ ಪೈಕಿ 6,806 ಮಂದಿ ಕೊನೆಯುಸಿರೆಳೆದಿದ್ದಾರೆ. ಬಾಂಗ್ಲಾದೇಶದಲ್ಲಿ 4,06,364 ಸೋಂಕು ಪ್ರಕರಣಗಳು ದಾಖಲಾಗಿದ್ದು, ಈವರೆಗೆ 5,905 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT