ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್: ಮಕ್ಕಳ ಮುಂದೆಯೇ ಪತ್ನಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿದ ಕ್ರೂರಿ ಪತಿ!

ಅಕ್ಷರ ಗಾತ್ರ

ಇಸ್ಲಾಮಾಬಾದ್: ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆಯೇ ಪತ್ನಿಯನ್ನು ಹತ್ಯೆ ಮಾಡಿದ್ದು, ಮೃತದೇಹವನ್ನು ಕಡಾಯಿಯಲ್ಲಿ ಬೇಯಿಸುವ ಮೂಲಕ ವಿಕೃತಿ ಮೆರೆದಿದ್ದಾನೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆ ಕೋಣೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಮೃತ ಮಹಿಳೆಯನ್ನು ನರ್ಗೀಸ್ ಎಂದು ಗುರುತಿಸಲಾಗಿದೆ. ಆರೋಪಿ ಪತಿ ‘ಆಶಿಕ್’ ಬಜಾರ್ ಎಜೆನ್ಸಿಯ ಶಾಲೆಯಲ್ಲಿ ವಾಚ್‍ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಆರೋಪಿ ತನ್ನ ಮೂವರು ಮಕ್ಕಳಗಳ ಜೊತೆ ಪರಾರಿಯಾಗಿದ್ದು, ಆತನ 15 ವರ್ಷದ ಪುತ್ರಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ಇದೀಗ ಮೂವರು ಮಕ್ಕಳನ್ನು ಪಾಲನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೂರ್ವ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‍ಎಸ್‍ಪಿ) ಅಬ್ದುರ್ ರಹೀಮ್ ಶೆರಾಜಿ ಮಾಹಿತಿ ನೀಡಿದ್ದಾರೆ.

ಆರೋಪಿ ಮೊದಲು ಪತ್ನಿಯನ್ನು ದಿಂಬಿನಿಂದ ಮೂಗು, ಬಾಯಿಯನ್ನು ಅಮುಕಿ ಕೊಲೆ ಮಾಡಿದ್ದಾನೆ. ನಂತರ ಮಕ್ಕಳ ಮುಂದೆಯೇ ಕಡಾಯಿಯಲ್ಲಿ ಬೇಯಿಸಿದ್ದಾನೆ. ಅಲ್ಲದೇ ಮಹಿಳೆಯ ಒಂದು ಕಾಲು ಕೂಡ ದೇಹದಿಂದ ಬೇರ್ಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಮಕ್ಕಳಿಂದ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT