ವಾಷಿಂಗ್ಟನ್ ಡಿಸಿಯಲ್ಲಿ ಲಾಕ್‌ಡೌನ್: ಬಿಗಿ ಭದ್ರತೆ

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಬುಧವಾರ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಪೊಲೀಸರಿಂದ ಭದ್ರತೆಯ ಕೋಟೆ ನಿರ್ಮಾಣ ಮಾಡಲಾಗಿದೆ.
ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸುಮಾರು 25 ಸಾವಿರಕ್ಕೂ ಹೆಚ್ಚು ಸೈನಿಕರು ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ.
ಟ್ಯಾಂಕ್‌ಗಳನ್ನು ಸಹ ನಿಯೋಜಿಸಲಾಗಿದೆ. ಹಲವು ಪ್ರಮುಖ ಮಾರ್ಗಗಳಲ್ಲಿ ಕ್ರಾಂಕೀಟ್ ತಡೆಗಳನ್ನು ನಿರ್ಮಿಸಲಾಗಿದೆ. ಅಮೆರಿಕ ಸಂಸತ್ ಭವನದ ಸುತ್ತ ಬೇಲಿಯನ್ನು ಹಾಕಲಾಗಿದೆ.
‘ಉಗ್ರಗಾಮಿ ಸಂಘಟನೆಗಳ ಚಟುವಟಿಕೆಗಳ ಮೇಲೆಯೂ ಪೊಲೀಸರು ನಿಗಾವಹಿಸಿದ್ದಾರೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಹ್ಯ ಬೆದರಿಕೆಯ ಜತೆಗೆ ಆಂತರಿಕವಾಗಿಯೂ ದಾಳಿ ಮತ್ತು ಹಿಂಸಾಚಾರ ನಡೆಸುವ ಸಾಧ್ಯತೆಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ, ಯಾವುದೇ ರೀತಿಯ ಲೋಪವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಚುನಾವಣೆಯಲ್ಲಿ ಆಯ್ಕೆಯಾಗಿರುವ ಜನಪ್ರತಿನಿಧಿಗಳಿಗೆ ಬೆದರಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಒಳನುಸುಳುವ ಕುರಿತು ಆನ್‌ಲೈನ್‌ನಲ್ಲಿ ನಡೆದಿರುವ ಕಾಮೆಂಟ್‌ಗಳ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕಾರ: ತಮಿಳುನಾಡಿನಲ್ಲಿ ಸಂಭ್ರಮ
ಎಫ್‌ಬಿಐ ಸೂಚನೆ ಮೇರೆಗೆ ರಾಷ್ಟ್ರೀಯ ಭದ್ರತಾ ಪಡೆಯ 12 ಮಂದಿಯನ್ನು ಭದ್ರತಾ ವ್ಯವಸ್ಥೆಯಿಂದ ತೆಗೆದುಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ. ಆದರೆ. ಈ ಬಗ್ಗೆ ರಕ್ಷಣಾ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದನ್ನೂ ಓದಿ: ಇಂದು ಜೋ ಬೈಡನ್, ಕಮಲಾ ಹ್ಯಾರಿಸ್ ಪ್ರಮಾಣ ವಚನ: ಹೇಗಿರುತ್ತೆ ಕಾರ್ಯಕ್ರಮ?
ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.